ಬೆಂಗಳೂರು ಹಾಗೂ ತುಮಕೂರಿನಲ್ಲಿ ಭೀಕರ ಅಪಘಾತ: ನಾಲ್ವರು ಯುವಕರು ದುರ್ಮರಣ
ರಾಜ್ಯದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ ನಾಲ್ವರು ಯುವಕರು ದುರ್ಮರಣ ಹೊಂದಿದ್ದಾರೆ.

ಬೆಂಗಳೂರು/ತುಮಕೂರು: ರಾಜ್ಯದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ ನಾಲ್ವರು ಯುವಕರು ದುರ್ಮರಣ ಹೊಂದಿದ್ದಾರೆ.
ಬೆಂಗಳೂರಿನ ಲಗ್ಗೆರೆಯ ರಿಂಗ್ ರಸ್ತೆಯ ಕೆಂಪೇಗೌಡ ಆರ್ಚ್ ಬಳಿ ಬಿಎಂಟಿಸಿ ಬಸ್ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಯುವಕರಿಬ್ಬರು ದುರ್ಮರಣ ಹೊಂದಿದ್ದಾರೆ. ಘಟನಾ ಸ್ಥಳಕ್ಕೆ ರಾಜಾಜಿನಗರ ಸಂಚಾರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಕೊರಟಗೆರೆಯಲ್ಲಿ ಅಪಘಾತ ಇಬ್ಬರು ಸಾವು!
ಲಾರಿ ಹಾಗೂ ಎರ್ಟಿಗಾ ಕಾರು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು ಐವರು ಗಾಯಗೊಂಡಿರುವ ಘಟನೆ ಕೊರಟಗೆರೆಯಲ್ಲಿ ನಡೆದಿದೆ. ಆಂಧ್ರದಿಂದ ತುಮಕೂರು ಕಡೆಗೆ ಬರುತ್ತಿದ್ದ ಲಾರಿ ಹಾಗೂ ಕಾರು ನಡುವೆ ಅಪಘಾತವಾಗಿದೆ.
ಮೃತರನ್ನು ದಾವಣಗೆರೆಯ ಶಿವು ನಾಯಕ್ ಹಾಗೂ ಮಧುಗಿರಿಯ ಕೊಡಿಗೇನಹಳ್ಳಿಯ ಪರಮೇಶ್ ಮೃತ ದುರ್ದೈವಿಗಳು. ಕಾರಿನಲ್ಲಿ ಒಟ್ಟು 7 ಮಂದಿ ಪ್ರಯಾಣಿಸುತ್ತಿದ್ದರು. ಈ ಪೈಕಿ ಇಬ್ಬರು ಮೃತಪಟ್ಟಿದ್ದರೆ, 5 ಮಂದಿ ಗಾಯಗೊಂಡಿದ್ದಾರೆ. ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕೊರಟಗೆರೆ ಠಾಣೆ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ: ಇಬ್ಬರು ಓರ್ವ ಬಾಲಕಿ, ಯುವತಿ ದುರ್ಮರಣ
ಬೆಂಗಳೂರು–ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬಾಲಕಿಯರು ದುರ್ಮರಣ ಹೊಂದಿದ್ದು ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ.
ಚನ್ನಪಟ್ಟಣದ ದೇವರಹೊಸಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು ಮೃತರನ್ನು 13 ವರ್ಷದ ಬಾಲಕಿ ಹಾಗೂ 20 ಯುವತಿ ಎಂದು ತಿಳಿದುಬಂದಿದೆ. ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಹೆಚ್.ಡಿ.ಕೋಟೆಯಿಂದ ಬೆಂಗಳೂರಿಗೆ ವಾಪಸ್ ಆಗುವ ವೇಳೆ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


