ರಾಜ್ಯ

ವಿಜಯಪುರದಲ್ಲಿ ರಸ್ತೆ ಅಪಘಾತ; ಕಂಟೈನರ್‌-ಬೈಕ್ ಮುಖಾಮುಖಿ ಡಿಕ್ಕಿಯಾಗಿ ನವದಂಪತಿ ದುರ್ಮರಣ!

ಬುಧವಾರ ಬೆಳಗ್ಗೆ ಇಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನವವಿವಾಹಿತ ದಂಪತಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಡಿಕ್ಕಿಯ ರಭಸಕ್ಕೆ ದಂಪತಿ ಸಾವಿಗೀಡಾಗಿದ್ದಾರೆ. ಅವರು ಕಳೆದ ತಿಂಗಳಷ್ಟೇ ಮದುವೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯಪುರದಲ್ಲಿ ರಸ್ತೆ ಅಪಘಾತ; ಕಂಟೈನರ್‌-ಬೈಕ್ ಮುಖಾಮುಖಿ ಡಿಕ್ಕಿಯಾಗಿ ನವದಂಪತಿ ದುರ್ಮರಣ!
ಮೃತ ದುರ್ದೈವಿಗಳು
Published On :

ವಿಜಯಪುರ: ಬುಧವಾರ ಬೆಳಗ್ಗೆ ಇಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನವವಿವಾಹಿತ ದಂಪತಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮಲ್ಲು ತೇರದಾಳ (31) ಎಂಬುವವರು ತನ್ನ ಪತ್ನಿ ಗಾಯತ್ರಿ (24) ಅವರೊಂದಿಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಸೊಲ್ಲಾಪುರ ಬೈಪಾಸ್ ರಸ್ತೆಯಲ್ಲಿ ಟ್ಯಾಂಕರ್‌ಗೆ ಮುಖಾಮುಖಿ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ದಂಪತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅವರು ಕಳೆದ ತಿಂಗಳಷ್ಟೇ ಮದುವೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಕರ ಮಕ್ಕಳ ಹುಟ್ಟುಹಬ್ಬಕ್ಕೆ ಹೋಗಿ ವಾಪಸ್ ಬರುವಾಗ ಈ ದುರ್ಘಟನೆ ಸಂಭವಿಸಿದ್ದು, ಮದುವೆಯಾಗಿ 24 ದಿನಗಳಿಗೆ ಈ ನವ ಜೋಡಿ ಸಾವಿಗೀಡಾಗಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.