ಅನ್ನಭಾಗ್ಯ: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಹೆಚ್ಚುವರಿ ಅಕ್ಕಿಗೆ ನಿರಾಕರಣೆ; ತೆಲಂಗಾಣಕ್ಕೆ ಸಚಿವ ಕೆಎಚ್ ಮುನಿಯಪ್ಪ ದೌಡು
ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಅನ್ನಭಾಗ್ಯಕ್ಕೆ ಅಕ್ಕಿ ಕೊರತೆ ಉಂಟಾಗಿರುವ ಹಿನ್ನಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಅವರು ಇಂದು ನೆರೆಯ ತೆಲಂಗಾಣಕ್ಕೆ ತೆರಳಿದ್ದಾರೆ.

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಅನ್ನಭಾಗ್ಯಕ್ಕೆ ಅಕ್ಕಿ ಕೊರತೆ ಉಂಟಾಗಿರುವ ಹಿನ್ನಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಅವರು ಇಂದು ನೆರೆಯ ತೆಲಂಗಾಣಕ್ಕೆ ತೆರಳಿದ್ದಾರೆ.
ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ನೀಡಬೇಕಾಗಿದ್ದ ಹೆಚ್ಚುವರಿ 5 ಕೆಜಿ ಅಕ್ಕಿಗೆ ಕೊಕ್ಕೆ ಹಾಕಿರುವ ಹಿನ್ನೆಲೆಯಲ್ಲಿ ಈ ಯೋಜನೆ ಜಾರಿಗೆ ಉಂಟಾಗಿರುವ ಅಕ್ಕಿ ಕೊರತೆ ನೀಗಿಸಲು ರಾಜ್ಯಸರ್ಕಾರ ಅನ್ಯ ರಾಜ್ಯಗಳತ್ತ ಮುಖ ಮಾಡಿದೆ. ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಕಿಗೆ ಕೇಂದ್ರ ಸರ್ಕಾರ ಅಡ್ಡಗಾಲು ಹಾಕಿದೆ ಎಂದು ಆರೋಪಿಸಿದ್ದ ಬೆನ್ನಲ್ಲೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ, ಸಚಿವ ಸಂಪುಟ ಸಭೆ ಮುಗಿದ ಬಳಿಕ ತೆಲಂಗಾಣ ರಾಜ್ಯಕ್ಕೆ ತೆರಳಿದ್ದಾರೆ.
ಮುಖ್ಯಮಂತ್ರಿ ಸೂಚನೆ ಮೇರೆಗೆ ಮುನಿಯಪ್ಪರವರು ತೆಲಂಗಾಣಕ್ಕೆ ತೆರಳಿದ್ದು, ಈ ವೇಳೆ ಮುಖ್ಯಮಂತ್ರಿ ಕೆ.ಸಿ. ಚಂದ್ರಶೇಖರರಾವ್, ಆಹಾರ ಸಚಿವರನ್ನು ಭೇಟಿ ಮಾಡಿ ಹೆಚ್ಚುವರಿ ಅಕ್ಕಿ ದಾಸ್ತಾನು ಇದ್ದರೆ ಅದನ್ನು ಖರೀದಿ ಮಾಡುತ್ತೇವೆ ಎಂದು ತೆಲಂಗಾಣ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಜುಲೈ 1 ರಿಂದ 'ಅನ್ನಭಾಗ್ಯ' ಜಾರಿ ಡೌಟ್: ಅಕ್ಕಿ ಸಂಗ್ರಹ ಇದ್ದರೂ ಕೇಂದ್ರ ಪೂರೈಕೆ ಮಾಡುತ್ತಿಲ್ಲ ಎಂದು ಸಿಎಂ ಆರೋಪ
ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುವುದಾಗಿ ಕಾಂಗ್ರೆಸ್ ಘೋಷಿಸಿತ್ತು. ಈಗ ಈ ಯೋಜನೆ ಜಾರಿಗೆ ತೆಲಂಗಾಣ ಸೇರಿದಂತೆ ಅನ್ಯ ರಾಜ್ಯದಿಂದ ಅಕ್ಕಿ ಖರೀದಿಗೆ ರಾಜ್ಯಸರ್ಕಾರ ಮುಂದಾಗಿದೆ. ತೆಲಂಗಾಣ ಮಾತ್ರವಲ್ಲದೇ ಛತ್ತೀಸ್‌ಗಢ ರಾಜ್ಯದಿಂದಲೂ ಲಭ್ಯವಿರುವ ಅಕ್ಕಿಯ ಮಾಹಿತಿ ಇಂದು ಸಂಜೆಯೊಳಗೆ ಲಭಿಸಲಿದೆ. ನಾಳೆ ಸಂಜೆಯೊಳಗೆ ಒಂದು ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಆಶಾಭಾವ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


