ರಾಜ್ಯ

ಮತ್ತೆ ಕಾಣಿಸಿಕೊಂಡ ಕ್ಯಾನ್ಸರ್: ಬೇಸತ್ತು ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್‌ಸ್ಟೆಬಲ್!

ಚಿಕಿತ್ಸೆ ಪಡೆದು ಗುಣಮುಖನಾದರೂ ಮತ್ತೆ ಕ್ಯಾನ್ಸರ್ ಕಾಣಿಸಿಕೊಂಡ ಪರಿಣಾಮ, ಬೇಸತ್ತ ಹೆಡ್ ಕಾನ್‌ಸ್ಟೆಬಲ್ ವೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.

ಮತ್ತೆ ಕಾಣಿಸಿಕೊಂಡ ಕ್ಯಾನ್ಸರ್: ಬೇಸತ್ತು ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್‌ಸ್ಟೆಬಲ್!
ಸಂಗ್ರಹ ಚಿತ್ರ
Published On :

ಬೆಂಗಳೂರು: ಚಿಕಿತ್ಸೆ ಪಡೆದು ಗುಣಮುಖನಾದರೂ ಮತ್ತೆ ಕ್ಯಾನ್ಸರ್ ಕಾಣಿಸಿಕೊಂಡ ಪರಿಣಾಮ, ಬೇಸತ್ತ ಹೆಡ್ ಕಾನ್‌ಸ್ಟೆಬಲ್ ವೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.

ಅಶೋಕನಗರ ಸಂಚಾರ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಕುಮಾರ್ (44) ಮೃತ ದುರ್ದೈವಿ. ಕುಮಾರ್ ಅವರು ಅಶೋಕನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ದಾವಣಗೆರೆಯ ಚನ್ನಗಿರಿ ತಾಲೂಕಿನವರಾದ ಕುಮಾರ್ 2005ರಲ್ಲಿ ಪೊಲೀಸ್ ಇಲಾಖೆಗೆ ಪೇದೆಯಾಗಿ ಸೇವೆ ಸಲ್ಲಿಸಿ ಎರಡು ವರ್ಷಗಳ ಹಿಂದೆ ಹೆಡ್ ಕಾನ್‌ಸ್ಟೆಬಲ್ ಆಗಿ ಬಡ್ತಿ ಪಡೆದಿದ್ದರು.

ಡೈರಿ ಸರ್ಕಲ್ ಸಮೀಪದ ಪೊಲೀಸ್ ಕ್ವಾಟ್ರಸ್ ನಲ್ಲಿ ತಮ್ಮ ಕುಟುಂಬದ ಜೊತೆ ನೆಲೆಸಿದ್ದರು. ಅನಾರೋಗ್ಯದಿಂದ ತೀವ್ರವಾಗಿ ನೊಂದಿದ್ದ ಕುಮಾರ್ ಅವರು, ಗುರುವಾರ ಬೆಳಗಿನ ಜಾವ 3.30ರ ಸುಮಾರಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಳಿಗ್ಗೆ ಮೃತರ ಪತ್ನಿ ನಿದ್ರೆಯಿಂದ ಎಚ್ಚರಗೊಂಡಾಗ ಪತಿ ಆತ್ಮಹತ್ಯೆಗೆ ಶರಮಾಗಿರುವುದು ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಎರಡು ವರ್ಷಗಳ ಹಿಂದೆ ಕುಮಾರ್ ಅವರಿಗೆ ಕರುಳಿನ ಕ್ಯಾನ್ಸರ್ ಕಾಣಿಸಿಕೊಂಡಿತ್ತು. ಇದಕ್ಕಾಗಿ ವೈದ್ಯಕೀಯ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದ ಅವರು ಮೊದಲ ಹಂತದಲ್ಲಿ ಕ್ಯಾನ್ಸರ್ ಗುಣಮುಖವಾಗಿತ್ತು. ಆದರೆ, ಐದು ದಿನಗಳ ಹಿಂದೆ ಮತ್ತೆ ಆರೋಗ್ಯದಲ್ಲಿ ಏರುಪೇರಾದ ಕಾರಣ ಆಸ್ಪತ್ರೆಗೆ ತೆರಳಿದಾಗ ಲಿವರ್ ನಲ್ಲಿ ಕೂಡ ಕ್ಯಾನ್ಸರ್ ಸೋಂಕು ಪತ್ತೆಯಾಗಿದೆ. ಆಗ ಇದೂ ಕೂಡ ಮೊದಲ ಹಂತದಲ್ಲೇ ಇದೆ. ಹೀಗಾಗಿ ನಿಯಮಿತವಾಗಿ ಚಿಕಿತ್ಸೆ ಹಾಗೂ ಮಾತ್ರೆಗಳನ್ನು ತೆಗೆದುಕೊಂಡರೆ ಗುಣಮುಖವಾಗಲಿದೆ ಎಂದು ವೈದ್ಯರು ಧೈರ್ಯ ತುಂಬಿದ್ದಾರೆ. ಆದರೆ, ಸಮಾಧಾನಗೊಳ್ಳದ ಕುಮಾರ್ ಅವರು ಖಿನ್ನತೆಗೊಳಗಾಗಿದ್ದರು. ಇದರಿಂದಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ್ಮಹತ್ಯೆಗೂ ಮುನ್ನ ಕುಮಾರ್ ಡೆತ್ ನೋಟ್ ಬರೆದಿದ್ದು, ಅನಾರೋಗ್ಯದಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಪತ್ರದಲ್ಲಿ ಹೇಳಿದ್ದಾರೆಂದು ತಿಳಿದುಬಂದಿದೆ.

ಈ ನಡುವೆ ಕುಟುಂಬದ ಸದಸ್ಯರು ಕುಮಾರ್ ಅವರ ನೇತ್ರದಾನ ಮಾಡಿದ್ದಾರೆ. ಆಡುಗೋಡಿ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.