ಹಜ್ ಯಾತ್ರಿಕರ ಯೋಗಕ್ಷೇಮ ನೋಡಿಕೊಂಡ ಸ್ವಯಂ ಸೇವಕರಿಗೆ ಉಮ್ರಾ ಪ್ರವಾಸ: ಸಚಿವ ಜಮೀರ್ ಅಹ್ಮದ್
ಹಜ್ ಯಾತ್ರಿಗಳ ಯೋಗಕ್ಷೇಮ ನೋಡಿಕೊಂಡ ಸ್ವಯಂ ಸೇವಕರನ್ನು ವೈಯಕ್ತಿಕ ವೆಚ್ಚದಲ್ಲಿ ಪವಿತ್ರ ಉಮ್ರಾ ಪ್ರವಾಸಕ್ಕೆ ಕಳುಹಿಸುವುದಾಗಿ ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಶುಕ್ರವಾರ ಹೇಳಿದರು.

ಬೆಂಗಳೂರು: ಹಜ್ ಯಾತ್ರಿಗಳ ಯೋಗಕ್ಷೇಮ ನೋಡಿಕೊಂಡ ಸ್ವಯಂ ಸೇವಕರನ್ನು ವೈಯಕ್ತಿಕ ವೆಚ್ಚದಲ್ಲಿ ಪವಿತ್ರ ಉಮ್ರಾ ಪ್ರವಾಸಕ್ಕೆ ಕಳುಹಿಸುವುದಾಗಿ ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಶುಕ್ರವಾರ ಹೇಳಿದರು.
ಶುಕ್ರವಾರ ಹಜ್ ಭವನಕ್ಕೆ ಭೇಟಿ ನೀಡಿ ಯಾತ್ರಿಗಳೊಂದಿಗೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಯಾತ್ರಿಗಳಿಗೆ ಶುಭ ಕೋರಿ ಮಾತನಾಡಿದ ಅವರು, ಕಳೆದ ಬಾರಿ 170 ಸ್ವಯಂ ಸೇವಕರನ್ನು ಉಮ್ರಾ ಪ್ರವಾಸಕ್ಕೆ ಕಳುಹಿಸಲಾಗಿತ್ತು. ಉಳಿದ ಸುಮಾರು 100 ಸ್ವಯಂ ಸೇವಕರನ್ನು ಈ ಬಾರಿ ಕಳುಹಿಸಲಾಗುವುದು ಎಂದು ತಿಳಿಸಿದರು.
ಹಜ್ ಯಾತ್ರಿಗಳ ಆರೈಕೆ ನಿಜಕ್ಕೂ ಪುಣ್ಯದ ಕೆಲಸವಾಗಿದೆ. ಹದಿನೈದು ದಿನಗಳ ಕಾಲ ಯಾತ್ರಿಗಳು ಹಾಗೂ ಅವರ ಕುಟುಂಬದವರ ಯೋಗಕ್ಷೇಮ ನೋಡಿಕೊಳ್ಳುವ ಮೂಲಕ ನೀವು ಅಲ್ಹಾನ ಕೃಪೆಗೆ ಪಾತ್ರರಾಗಿದ್ದೀರಿ. ಈ ಬಾರಿಯ ಹಜ್ ಯಾತ್ರೆ ವ್ಯವಸ್ಥೆ ಒಂದು ರೀತಿಯ ವಿಶಿಷ್ಟ ಅನುಭವ ನೀಡಿದೆ. ಅಚ್ಚುಕಟ್ಟಾಗಿ ನೆರವೇರಲು ಸ್ವಯಂ ಸೇವಕರ ಶ್ರಮ ಹೆಚ್ಚಾಗಿದೆ. ಯಾತ್ರಿಕರ ಆಶೀರ್ವಾದ ಸಿಕ್ಕಿದ್ದು ನನ್ನ ಪುಣ್ಯ ಎಂದು ಅವರು ಸಂತಸ ವ್ಯಕ್ತಪಡಿಸಿದರು.
ಯಾತ್ರಿಕರೊಂದಿಗೆ ಸಂವಾದ ನಡೆಸಿ ಕುಟುಂಬದ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದರು. ಬಳಿಕ ಸ್ವಯಂ ಸೇವಕರ ಕುಶಲೋಪರಿ ವಿಚಾರಿಸಿದರು. ಯಾತ್ರಿಕರು ಹಾಗೂ ಅವರ ಕುಟುಂಬಸ್ಥರು ನಿತ್ಯ ಊಟ ತಿಂಡಿ ಸೇವಿಸುವ ಸಭಾಂಗಣಕ್ಕೆ ಭೇಟಿ ನೀಡಿ ಆತಿಥ್ಯದ ಬಗ್ಗೆ ವಿಚಾರಿಸಿ, ಅಡುಗೆ ಕೋಣೆ ಸ್ವಚ್ಛವಾಗಿರಿಸುವಂತೆ ಸೂಚಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


