ಪೊಲೀಸ್ ವಶದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಮರಳು ಮಾಫಿಯಾ ಆರೋಪಿ ಕಾಲಿಗೆ ಗುಂಡೇಟು!
ಕಲಬುರಗಿ ಜಿಲ್ಲೆಯಲ್ಲಿ ಮರಳು ಸಾಗಣೆ ತಡೆಯಲು ಯತ್ನಿಸಿದ್ದ ಪೊಲೀಸ್ ಪೇದೆ ಹತ್ಯೆಯ ಆರೋಪಿ, ಮರಳು ಮಾಫಿಯಾದ ಆರೋಪಿ ಪೊಲೀಸ್ ವಶದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಪೊಲೀಸರು ಆತನ ಕಾಲಿಗೆ ಗುಂಡು ಹೊಡೆದು ಮರಳಿ ವಶಕ್ಕೆ ಪಡೆದಿದ್ದಾರೆ.

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಮರಳು ಸಾಗಣೆ ತಡೆಯಲು ಯತ್ನಿಸಿದ್ದ ಪೊಲೀಸ್ ಪೇದೆ ಹತ್ಯೆಯ ಆರೋಪಿ, ಮರಳು ಮಾಫಿಯಾದ ಆರೋಪಿ ಪೊಲೀಸ್ ವಶದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಪೊಲೀಸರು ಆತನ ಕಾಲಿಗೆ ಗುಂಡು ಹೊಡೆದು ಮರಳಿ ವಶಕ್ಕೆ ಪಡೆದಿದ್ದಾರೆ.
ಆರೋಪಿ ನೆಲೋಗಿ ಪೊಲೀಸ್ ಠಾಣೆಯ ಪಿಎಸ್ ಐ ಮೇಲೆ ಹಲ್ಲೆ ಮಾಡಿ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಈತ ಪೊಲೀಸ್ ಪೇದೆ ಮಯೂರ ಚೌಹಾಣ್ ಹತ್ಯೆ ಪ್ರಕರಣದ ಆರೋಪಿಯಾಗಿದ್ದಾನೆ.
ಜೇವರ್ಗಿ ಪೊಲೀಸ್ ಠಾಣೆಯ ಮತ್ತೊಬ್ಬ ಪಿಎಸ್ಐ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಸೈಬಣ್ಣ ಕರಜಗಿಗೆ ಗುಂಡೇಟು ಹೊಡೆದಿದ್ದು, ಮರಳಿ ವಾಪಸ್ ವಶಕ್ಕೆ ಪಡೆದಿದ್ದಾರೆ.
ಜೇವರ್ಗಿ ತಾಲೂಕಿನ ಮಂಡೇವಾಲದಲ್ಲಿ ಈ ಘಟನೆ ನಡೆದಿದೆ. ಮಯೂರ್ ಚೌಹಾಣ್ ಹತ್ಯೆ ಪ್ರಕರಣದ ಆರೋಪಿ ವಿಜಯಪುರ ಜಿಲ್ಲೆಯ ಅಲಮೇಲ್ ಗ್ರಾಮದಲ್ಲಿ ಆಶ್ರಯ ಪಡೆದಿದ್ದ. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನನ್ನು ಬಂಧಿಸಲು ಪೊಲೀಸ್ ತಂಡ ತೆರಳಿತ್ತು. ಅಲ್ಮೇಲ್ ನಿಂದ ಆರೋಪಿಯನ್ನು ಜೇವರ್ಗಿಗೆ ಕರೆತರಲಾಗುತ್ತಿತ್ತು. ಮಾರ್ಗಮಧ್ಯದಲ್ಲಿ ಮುಖ್ಯ ಆರೋಪಿ, ನೆಲೋಗಿ ಪೊಲೀಸ್ ಠಾಣೆಯ ಪಿಎಸ್‌ಐ ಬಸವರಾಜ್ ಹಾಗೂ ಇತರ ಪೊಲೀಸ್ ಸಿಬ್ಬಂದಿ ಮೇಲೆ ಚಾಕುವಿನಿಂದ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಮೊದಲು ಗಾಳಿಯಲ್ಲಿ ಗುಂಡು ಹಾರಿಸಿ ಪೊಲೀಸರು ಯತ್ನಿಸಿದರಾದರೂ ಆತ ದಾಳಿ ಮುಂದುವರೆಸಿದ ಕಾರಣ ಕಾಲಿಗೆ ಗುಂಡುಹೊಡೆದು ವಶಕ್ಕೆ ಪಡೆಯಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


