ರಾಜ್ಯ

ಗೃಹ ಜ್ಯೋತಿ ಯೋಜನೆಗೆ ಭರ್ಜರಿ ಪ್ರತಿಕ್ರಿಯೆ: ಮೂರು ದಿನಗಳಲ್ಲಿ 8 ಲಕ್ಷಕ್ಕೂ ಅಧಿಕ ಗ್ರಾಹಕರಿಂದ ನೋಂದಣಿ

ಚುನಾವಣೆಗೂ ಮುನ್ನ ಕಾಂಗ್ರೆಸ್​ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಗೃಹಜ್ಯೋತಿ ಯೋಜನೆಯ ನೋಂದಣಿ ಕಾರ್ಯಕ್ಕೆ ಜೂನ್​ 18ರಂದು ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಮೊದಲ ದಿನ 96 ಸಾವಿರಕ್ಕೂ ಹೆಚ್ಚು ಮಂದಿ ಗ್ರಾಹಕರು ಅರ್ಜಿ ಸಲ್ಲಿಸಿದ್ದರೆ, ಎರಡನೇ ದಿನ ಈ ಸಂಖ್ಯೆ ದುಪ್ಪಟ್ಟಾಗಿತ್ತು. ಇದೀಗ ಮೂರನೇ ದಿನ ಯೋಜನೆಗೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ.

ಗೃಹ ಜ್ಯೋತಿ ಯೋಜನೆಗೆ ಭರ್ಜರಿ ಪ್ರತಿಕ್ರಿಯೆ: ಮೂರು ದಿನಗಳಲ್ಲಿ 8 ಲಕ್ಷಕ್ಕೂ ಅಧಿಕ ಗ್ರಾಹಕರಿಂದ ನೋಂದಣಿ
ಗೃಹ ಜ್ಯೋತಿ ಯೋಜನೆ
Published On :

ಬೆಂಗಳೂರು: ಚುನಾವಣೆಗೂ ಮುನ್ನ ಕಾಂಗ್ರೆಸ್​ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಗೃಹಜ್ಯೋತಿ ಯೋಜನೆಯ ನೋಂದಣಿ ಕಾರ್ಯಕ್ಕೆ ಜೂನ್​ 18ರಂದು ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಮೊದಲ ದಿನ 96 ಸಾವಿರಕ್ಕೂ ಹೆಚ್ಚು ಮಂದಿ ಗ್ರಾಹಕರು ಅರ್ಜಿ ಸಲ್ಲಿಸಿದ್ದರೆ, ಎರಡನೇ ದಿನ ಈ ಸಂಖ್ಯೆ ದುಪ್ಪಟ್ಟಾಗಿತ್ತು. ಇದೀಗ ಮೂರನೇ ದಿನ ಯೋಜನೆಗೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ.

ಜೂನ್ 20ರ ಹೊತ್ತಿಗೆ, ಕರ್ನಾಟಕದಲ್ಲಿ ಒಟ್ಟು 8,16,631 ಗ್ರಾಹಕರು ಗೃಹ ಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಗೃಹ ಜ್ಯೋತಿ ಯೋಜನೆಯಡಿ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಪಡೆಯಬಹುದಾಗಿದ್ದು, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

'ರಾಜ್ಯ ಸರ್ಕಾರದ ಪ್ರಮುಖ ಕಾರ್ಯಕ್ರಮದ ನೋಂದಣಿಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಕರ್ನಾಟಕದಾದ್ಯಂತ ಜೂನ್ 18 ರಿಂದ ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ನೋಂದಣಿ ನಡೆಯುತ್ತಿದೆ' ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೊದಲ ದಿನ 96,305 ಗ್ರಾಹಕರು ನೋಂದಣಿ ಮಾಡಿಕೊಂಡಿದ್ದರು. ಎರಡನೇ ದಿನ ಈ ಸಂಖ್ಯೆ 3,34,845ಕ್ಕೆ ಏರಿದೆ. ಜೂನ್ 20 ರಂದು 3,85,481 ನೋಂದಣಿಗಳು ಬಂದಿವೆ. ಈ ಮೂವಕ ಮಂಗಳವಾರ ಸಂಜೆ ವೇಳೆ ಒಟ್ಟು 8,16,631 ಮಂದಿ ಗೃಹ ಜ್ಯೋತಿ ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ.

Story image

ನೋಂದಣಿಗೆ ಬೇಕಿರುವ ದಾಖಲೆಗಳು

ಯೋಜನೆಗೆ ನೋಂದಣಿ ಮಾಡಿಕೊಳ್ಳುವ ಪ್ರಕ್ರಿಯೆಯು ತುಂಬಾ ಸರಳವಾಗಿದ್ದು, ಸೇವಾಸಿಂಧು (https://sevasindhugs.karnataka.gov.in) ಪೋರ್ಟಲ್‌ನಲ್ಲಿ ಖಾತೆ ಸಂಖ್ಯೆ, ಆಧಾರ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆಗಳನ್ನು ನಮೂದಿಸುವ ಮೂಲಕ ಸುಲಭವಾಗಿ ನೋಂದಣಿ ಮಾಡಿಕೊಳ್ಳಬಹುದು.

ಸದ್ಯ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಯಾವುದೇ ಗಡುವನ್ನು ವಿಧಿಸಲಾಗಿಲ್ಲ. ಆದ್ದರಿಂದ ಗ್ರಾಹಕರು ಆತಂಕ ಪಡುವ ಅಗತ್ಯವಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.