ಮರಳು ಮಾಫಿಯಾಗೆ ಬಲಿಯಾದ ಪೇದೆ ಮನೆಗೆ ಪ್ರಿಯಾಂಕ್ ಖರ್ಗೆ ಭೇಟಿ: 1 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ
ಇತ್ತೀಚೆಗೆ ಅಕ್ರಮ ಮರಳು ತಪಾಸಣೆ ಸಂದರ್ಭದಲ್ಲಿ ಟ್ರಾಕ್ಟರ್ ಗೆ ಸಿಲುಕಿ ಸಾವನಪ್ಪಿದ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್ ಠಾಣೆಯ ಮುಖ್ಯ ಪೇದೆ ಮಯೂರ್ ಚೌಹಾಣ್ ಅವರ ನಿವಾಸಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಂಗಳವಾರ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಕಲಬುರಗಿ: ಇತ್ತೀಚೆಗೆ ಅಕ್ರಮ ಮರಳು ತಪಾಸಣೆ ಸಂದರ್ಭದಲ್ಲಿ ಟ್ರಾಕ್ಟರ್ ಗೆ ಸಿಲುಕಿ ಸಾವನಪ್ಪಿದ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್ ಠಾಣೆಯ ಮುಖ್ಯ ಪೇದೆ ಮಯೂರ್ ಚೌಹಾಣ್ ಅವರ ನಿವಾಸಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಂಗಳವಾರ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಶಾಸಕ ಎಂ.ವೈ.ಪಾಟೀಲ ಜೊತೆ ಸೇರಿ ತಮ್ಮ ಪಕ್ಷದ ವತಿಯಿಂದ 1 ಲಕ್ಷ ರೂ. ಚೆಕ್ ಅನ್ನು ಮೃತ ಮಯೂರ್ ಚೌಹಾಣ್ ಅವರ ಪತ್ನಿ ನಿರ್ಮಲಾ ಅವರಿಗೆ ವಿತರಿಸಿದರು.
ಇದೇ ವೇಳೆ ಸರ್ಕಾರದಿಂದ ಸಿಗಬೇಕಾದ ಎಲ್ಲಾ ಸೌಲಭ್ಯ ಕಲ್ಪಿಸಲಾಗುವುದು. ಧೈರ್ಯದಿಂದಿರಿ, ಆತ್ಮ ವಿಶ್ವಾಸ ಕಳೆದುಕೊಳ್ಳಬೇಡಿ. ಸರ್ಕಾರ ನಿಮ್ಮೊಂದಿಗಿದೆ ಎಂದು ಕುಟುಂಬಸ್ಥರಿಗೆ ಸಚಿವರು ಮತ್ತು ಶಾಸಕರು ಸಾಂತ್ವನ ನುಡಿಗಳನ್ನಾಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಅವರು, ಮೃತ ಮಯೂರ್ ಚೌಹಾಣ್ ಕುಟುಂಬಕ್ಕೆ ಪೊಲೀಸ್ ಇಲಾಖೆಯಿಂದ 30 ಲಕ್ಷ ರೂ. ಪರಿಹಾರ ನೀಡಲಾಗುವುದು. ಜೊತೆಗೆ ಸೇವಾ ವಿಮೆ, ಗ್ರಾಜುಟಿ ಸೇರಿದಂತೆ ಇತರೆ 10 ಲಕ್ಷ ರೂ. ಕುಟುಂಬಕ್ಕೆ ಸಿಗಲಿದೆ. ಸರ್ಕಾರದ ನಿಯಮಾವಳಿಯಂತೆ ಕುಟುಂಬದ ಓರ್ವ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಲಾಗುವುದು. ಮಕ್ಕಳ ವಿಧ್ಯಾಬ್ಯಾಸದ ಬಗ್ಗೆಯೂ ಸರ್ಕಾರ ಗಮನಹರಿಸಲಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಅಕ್ರಮ ಮರಳು ಮಾಫಿಯಾಗೆ ಕಡಿವಾಣ ಹಾಕಲಾಗುವುದು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು 1 ತಿಂಗಳಾಗಿದೆ. ಜಿಲ್ಲೆಯಲ್ಲಿನ ಅಕ್ರಮ ಮರಳುಗಾರಿಕೆ, ಗಣಿಗಾರಿಕೆ, ಜೂಜು ಅಡ್ಡೆ ತಡೆಯಲು ಈಗಾಗಲೆ ಹೆಜ್ಜೆ ಇಟ್ಟಿದ್ದೇವೆ. ಈ ಪ್ರಕರಣ ಸ್ಟಾಕ್ ಯಾರ್ಡ್ ನಿಂದ ಮರಳು ತರುವಾಗ ಘಟಿಸಿದೆ. ಇದರಲ್ಲಿ ಯಾರೇ ತಪ್ಪಿತಸ್ಥರಿದ್ದರು ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


