ದಾವಣಗೆರೆ: ಟಿಪ್ಪರ್ ಲಾರಿ ಹರಿದು 2 ವರ್ಷದ ಬಾಲಕಿ ಸಾವು
ಟಿಪ್ಪರ್ ಲಾರಿ ಹರಿದು 2 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ನಗರದ ಹಳೇ ಕುಂದುವಾಡದಲ್ಲಿ ಇಂದು ನಡೆದಿದೆ.

ದಾವಣಗೆರೆ: ಟಿಪ್ಪರ್ ಲಾರಿ ಹರಿದು 2 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ನಗರದ ಹಳೇ ಕುಂದುವಾಡದಲ್ಲಿ ಇಂದು ನಡೆದಿದೆ.
ಕುಂದುವಾಡ ಗ್ರಾಮದ ನಿವಾಸಿ ಗಣೇಶ್ ಎಂಬವರ ಪುತ್ರಿ ಎರಡುವರೆ ವರ್ಷದ ಚರಸ್ವಿ ಮೃತಪಟ್ಟ ಮಗುವಾಗಿದೆ. ಅಂಗನವಾಡಿ ಮುಗಿಸಿ ಅಜ್ಜಿ ಜೊತೆ ಮನೆಗೆ ಬರುತ್ತಿದ್ದಾಗ ಟಿಪ್ಪರ್ ಲಾರಿ ಬಾಲಕಿ ಮೈಮೇಲೆ ಹರಿದಿದ್ದು ಇದರಿಂದಾಗಿ ಮಗು ಸ್ಥಳದಲ್ಲೇ ಸಾವನ್ನಪ್ಪಿತ್ತು.
ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು ಚಾಲಕನ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ಇನ್ನು ಅಪಘಾತದಿಂದ ಆಕ್ರೋಶಗೊಂಡ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಈ ವೇಳೆ ಗ್ರಾಮಸ್ಥರು ಲಾರಿ ಚಾಲಕ, ಮಾಲೀಕನ ಬಂಧನಕ್ಕೆ ಒತ್ತಾಯಿಸಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ದಕ್ಷಿಣ ಸಂಚಾರಿ ಠಾಣೆಯ ಪೊಲೀಸರು ಹಾಗು ವಿದ್ಯಾನಗರ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


