ರಾಜ್ಯ

3,500 ಪೊಲೀಸರ ನೇಮಕಕ್ಕೆ ಇನ್ನೊಂದು ವಾರದಲ್ಲಿ ಆದೇಶ: ಗೃಹ ಸಚಿವ ಪರಮೇಶ್ವರ್

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಒಟ್ಟು 15 ಸಾವಿರ ಪೊಲೀಸರ ಹುದ್ದೆ ಖಾಲಿ ಇದ್ದು, ಇನ್ನೊಂದು ವಾರದಲ್ಲಿ 3,500 ಪೊಲೀಸರ ನೇಮಕಕ್ಕೆ ಆದೇಶಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಗುರುವಾರ ತಿಳಿಸಿದ್ದಾರೆ.

3,500 ಪೊಲೀಸರ ನೇಮಕಕ್ಕೆ ಇನ್ನೊಂದು ವಾರದಲ್ಲಿ ಆದೇಶ: ಗೃಹ ಸಚಿವ ಪರಮೇಶ್ವರ್
ಪರಮೇಶ್ವರ್
Published On :

ತುಮಕೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಒಟ್ಟು 15 ಸಾವಿರ ಪೊಲೀಸರ ಹುದ್ದೆ ಖಾಲಿ ಇದ್ದು, ಇನ್ನೊಂದು ವಾರದಲ್ಲಿ 3,500 ಪೊಲೀಸರ ನೇಮಕಕ್ಕೆ ಆದೇಶಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಗುರುವಾರ ತಿಳಿಸಿದ್ದಾರೆ.

ಇಂದು ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಈಗಾಗಲೇ ಪೊಲೀಸರ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿದ್ದೇವೆ ಎಂದು ತಿಳಿಸಿದರು.

ಇನ್ನು ಸ್ಮಾರ್ಟ್​​ಸಿಟಿ ಯೋಜನೆಯಡಿ ತುಮಕೂರಿಗೆ 1 ಸಾವಿರ ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ. ಕೇಂದ್ರದಿಂದ ಶೇ.50, ರಾಜ್ಯ ಸರ್ಕಾರದಿಂದ ಶೇ.50ರಷ್ಟು ಅನುದಾನ ನೀಡಿದ್ದು, ಈಗಾಗಲೇ ಕೇಂದ್ರ ಸರ್ಕಾರ ಶೇ.45ರಷ್ಟು ಹಣ ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರ 443 ಕೋಟಿ ರೂ. ಅನುದಾನ ಮಂಜೂರು ಮಾಡಿದೆ ಎಂದರು.

ಸ್ಮಾರ್ಟ್​​​ಸಿಟಿ ಯೋಜನೆಯಡಿ 170 ಕಾಮಗಾರಿ ನಡೆಯುತ್ತಿವೆ. ನವೆಂಬರ್​​ ನೊಳಗೆ ಎಲ್ಲಾ ಕಾಮಗಾರಿ ಮುಗಿಸಲು ಸೂಚನೆ ನೀಡಿದ್ದೇನೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.