ಪಿಎಸ್ಐ ನೇಮಕಾತಿ ಹಗರಣ: ಅಕ್ರಮ ಎಸಗಿದ್ದ 52 ಅಭ್ಯರ್ಥಿಗಳು ಶಾಶ್ವತ ಡಿಬಾರ್!
ರಾಜ್ಯದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದ್ದ 545 ಪಿಎಸ್ಐ ಹುದ್ದೆಗಳ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ 52 ಅಭ್ಯರ್ಥಿಗಳನ್ನು ಪೊಲೀಸ್ ಇಲಾಖೆ ನಡೆಸುವ ಯಾವುದೇ ನೇಮಕಾತಿ ಪರೀಕ್ಷೆಯಲ್ಲಿ ಭಾಗವಹಿಸದಂತೆ ಶಾಶ್ವತವಾಗಿ ಡಿಬಾರ್ ಮಾಡಿ ಆದೇಶಿಸಲಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದ್ದ 545 ಪಿಎಸ್ಐ ಹುದ್ದೆಗಳ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ 52 ಅಭ್ಯರ್ಥಿಗಳನ್ನು ಪೊಲೀಸ್ ಇಲಾಖೆ ನಡೆಸುವ ಯಾವುದೇ ನೇಮಕಾತಿ ಪರೀಕ್ಷೆಯಲ್ಲಿ ಭಾಗವಹಿಸದಂತೆ ಶಾಶ್ವತವಾಗಿ ಡಿಬಾರ್ ಮಾಡಿ ಆದೇಶಿಸಲಾಗಿದೆ.
ಈ ಕುರಿತು ರಾಜ್ಯ ಪೊಲೀಸ್ ಇಲಾಖೆಯ ನೇಮಕಾತಿ ವಿಭಾಗದ ಡಿಜಿಪಿ ಕಮಲ್ ಪಂತ್ ಬುಧವಾರ ಆದೇಶ ಹೊರಡಿಸಿದ್ದಾರೆ,
2021 ಅಕ್ಟೋಬರ್ 3 ರಂದು 545 ಪಿಎಸ್‌ಐ ಹುದ್ದೆಗಳ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂಬ ದೂರು ಕೇಳಿ ಬಂದಿದ್ದರಿಂದ ಸಿಐಡಿ ಇದರ ತನಿಖೆ ನಡೆಸಿ ಆರೋಪಿಗಳನ್ನು ದಸ್ತಗಿರಿ ಮಾಡಿ ಮೊಕದ್ದಮೆ ದಾಖಲಿಸಲಾಗಿತ್ತು.
ಬೆಂಗಳೂರು ನಗರ, ಕಲಬುರಗಿ, ಹುಬ್ಬಳ್ಳಿ- ಧಾರವಾಡ ನಗರ, ತುಮಕೂರು ನಗರ ಠಾಣೆಗಳಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದವು.
ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ಪತ್ರಿಕೆ-1ರಲ್ಲಿ ಕೆಲ ಅಭ್ಯರ್ಥಿಗಳು ಬ್ಲೂಟೂತ್, ಇತರೆ ಎಲೆಕ್ಟ್ರಾನಿಕ್ ಸಾಧನ ಬಳಸಿ ಅಕ್ರಮ ಎಸಗಿದ್ದು ಬೆಳಕಿಗೆ ಬಂದಿತ್ತು. ಕೆಲವು ಅಭ್ಯರ್ಥಿಗಳು ಓಎಂಆರ್ ಶೀಟ್‌ಗಳನ್ನೇ ತಿದ್ದುಪಡಿ ಮಾಡಿಸಿಕೊಂಡಿರುವುದು ದೃಢವಾಗಿದ್ದರಿಂದ ಅಂಥಹ ಅಭ್ಯರ್ಥಿಗಳನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ 52 ಆರೋಪಿಗಳು ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಬಗ್ಗೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಡಿಬಾರ್ ಮಾಡುವ ಮುನ್ನ ಈ 52 ಜನರ ಬಳಿ ಸ್ಪಷ್ಟನೆ ಕೇಳಲಾಗಿತ್ತು. ಸ್ಪಷ್ಟನೆ ಪಡೆದ ನಂತರವೇ ಈ ಎಲ್ಲಾ 52 ಅಭ್ಯರ್ಥಿಗಳನ್ನು ನೇಮಕಾತಿ ಪರೀಕ್ಷೆಗಳಿಂದ ಶಾಶ್ವತವಾಗಿ ಡಿಬಾರ್ ಮಾಡಲಾಗಿದೆ ಎಂದು ಡಿಜಿಪಿ (ನೇಮಕಾತಿ) ಅವರ ಆದೇಶ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


