ರಾಜ್ಯದಲ್ಲಿ ಬರ, ಪ್ರವಾಹ ಪರಿಸ್ಥಿತಿ ನಿಭಾಯಿಸಲು ಕೃಷ್ಣ ಭೈರೇಗೌಡ ನೇತೃತ್ವದ ಸಚಿವ ಸಂಪುಟ ಉಪ ಸಮಿತಿ ರಚನೆ
ರಾಜ್ಯದಲ್ಲಿ ಬರ, ಪ್ರವಾಹ ಮತ್ತು ಇತರೆ ನೈಸರ್ಗಿಕ ವಿಕೋಪಗಳಿಂದ ಉದ್ಬವಿಸಬಹುದಾದ ಪರಿಸ್ಥಿತಿ ಪರಾಮರ್ಶಿಸಲು ಮತ್ತು ಇದನ್ನು ಸಮರ್ಥವಾಗಿ ನಿಭಾಯಿಸಲು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಲಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಬರ, ಪ್ರವಾಹ ಮತ್ತು ಇತರೆ ನೈಸರ್ಗಿಕ ವಿಕೋಪಗಳಿಂದ ಉದ್ಬವಿಸಬಹುದಾದ ಪರಿಸ್ಥಿತಿ ಪರಾಮರ್ಶಿಸಲು ಮತ್ತು ಇದನ್ನು ಸಮರ್ಥವಾಗಿ ನಿಭಾಯಿಸಲು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಲಾಗಿದೆ.
ಲೋಕೋಪಯೋಗ ಸಚಿವ ಸತೀಶ್ ಜಾರಕಿಹೊಳಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್, ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಮತ್ತು ಸಹಕಾರ ಸಚಿವ ಎನ್ ರಾಜಣ್ಣ ಈ ಸಮಿತಿಯ ಸದಸ್ಯರಾಗಿದ್ದಾರೆ.

ನೈಸರ್ಗಿಕ ವಿಕೋಪಗಳಂತಹ ಸಂದರ್ಭದಲ್ಲಿ ನೀತಿ ನಿರೂಪಣೆ ರಚನೆ ಹಾಗೂ ತೆಗೆದುಕೊಳ್ಳಬೇಕಾದ ಕ್ರಮಗಳು, ಅಗತ್ಯ ನಿರ್ದೇಶನಗಳನ್ನು ಸಚಿವ ಸಂಪುಟದ ಉಪ ಸಮಿತಿ ನೀಡಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


