ಚಾಮರಾಜನಗರ: ನೇಣು ಬಿಗಿದುಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಬೇಡರಪುರ ಗ್ರಾಮದಲ್ಲಿ ನಡೆದಿದೆ.

ಚಾಮರಾಜನಗರ: ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಬೇಡರಪುರ ಗ್ರಾಮದಲ್ಲಿ ನಡೆದಿದೆ.
ಚಾಮರಾಜನಗರ ತಾಲೂಕಿನ ಬೇಡರಪುರ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಮೃತಪಟ್ಟವರನ್ನು ಮಹದೇವಸ್ವಾಮಿ (48), ಸವಿತಾ (40), ಸಿಂಚನಾ (13) ಎಂದು ಗುರುತಿಸಿದ್ದಾರೆ. ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ.
ಶುಕ್ರವಾರ ಬೆಳಗ್ಗೆ ಪಕ್ಕದ ಮನೆಯವರು ಮನೆಗೆ ಹೋದಾಗ ಮನೆಯಲ್ಲಿದ್ದ ಮೂವರೂ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಇದನ್ನೂ ಓದಿ: ಬೆಳಗಾವಿ: ಮರಳು ತುಂಬಿದ ಲಾರಿ ಹರಿದು ಮಹಿಳೆ ಸಾವು
ಆದರೆ, ಇವರ ಕುಟುಂಬಗಳ ನಡುವೆ ಆಸ್ತಿ ವಿಚಾರಕ್ಕೆ ಗಲಾಟೆ ನಡೆಯುತಿತ್ತು ಎಂದು ಹೇಳಲಾಗಿದೆ. ಆದರೆ, ಸಾವಿಗೆ ಅದೇ ಕಾರಣವಾಯಿತಾ? ಬೇರೆ ಏನಾದರೂ ಕಾರಣಗಳಿವೆಯೇ ಎಂದು ತಿಳಿದುಬಂದಿಲ್ಲ. ಸದ್ಯ ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


