ರಾಜ್ಯ

ಡೇ ಕೇರ್'ನಲ್ಲಿ ಮಗು ಮೇಲೆ ಮತ್ತೊಂದು ಮಗು ಹಲ್ಲೆ: ವೀಡಿಯೋ ವೈರಲ್, ಸಿಬ್ಬಂದಿಗಳ ವಿರುದ್ಧ ನೆಟ್ಟಿಗರ ಆಕ್ರೋಶ

ನಗರದ ಮಕ್ಕಳ ಡೇ ಕೇರ್ ಸೆಂಟರ್ ವೊಂದರಲ್ಲಿ 2 ವರ್ಷದ ಹೆಣ್ಣು ಮಗುವಿನ ಮೇಲೆ ಮೂರು ವರ್ಷದ ಮಗು ಹಲ್ಲೆ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಘಟನೆ ಬೆನ್ನಲ್ಲೇ ಡೇ ಕೇರ್ ಸೆಂಟರ್ ಗಳ ನಿರ್ಲಕ್ಶ್ಯದ ವಿರುದ್ಧ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ

ಡೇ ಕೇರ್'ನಲ್ಲಿ ಮಗು ಮೇಲೆ ಮತ್ತೊಂದು ಮಗು ಹಲ್ಲೆ: ವೀಡಿಯೋ ವೈರಲ್, ಸಿಬ್ಬಂದಿಗಳ ವಿರುದ್ಧ ನೆಟ್ಟಿಗರ ಆಕ್ರೋಶ
ಮಗುವಿನ ಮೇಲೆ ಮತ್ತೊಂದು ಮಗು ಹಲ್ಲೆ ನಡೆಸುತ್ತಿರುವುದು.
Published On :

ಬೆಂಗಳೂರು: ನಗರದ ಮಕ್ಕಳ ಡೇ ಕೇರ್ ಸೆಂಟರ್ ವೊಂದರಲ್ಲಿ 2 ವರ್ಷದ ಹೆಣ್ಣು ಮಗುವಿನ ಮೇಲೆ ಮೂರು ವರ್ಷದ ಮಗು ಹಲ್ಲೆ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಘಟನೆ ಬೆನ್ನಲ್ಲೇ ಡೇ ಕೇರ್ ಸೆಂಟರ್ ಗಳ ನಿರ್ಲಕ್ಶ್ಯದ ವಿರುದ್ಧ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಉತ್ತರಹಳ್ಳಿ ಸಮೀಪದ ಚಿಕ್ಕಲ್ಲಸಂದ್ರದಲ್ಲಿ ಇರುವ ಟೆಂಡರ್ ಫೂಟ್ ಎಂಬ ಡೇ ಕೇರ್ ಸೆಂಟರ್ ನಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ಡೇ ಕೇರ್ ಸೆಂಟರ್ ಅಲ್ಲಿ ಮಕ್ಕಳನ್ನು ನೋಡಿಕೊಳ್ಳುತ್ತಿದ್ದ ಆಯಾ ಒಂದು ಮಗುವನ್ನು ಹೊರಗೆ ಕರೆದುಕೊಂಡು ಹೋಗುತ್ತಾರೆ. ಈ ಸಂದರ್ಭದಲ್ಲಿ ಒಂದು ಮಗು ಇನ್ನೊಂದು ಮಗುವನ್ನು ಹಿಡಿದುಕೊಂಡು ಹೊಡೆದಿದೆ. ಸುಮಾರು ನಾಲ್ಕೈದು ನಿಮಿಷ ಹೊಡೆದರೂ ಮಕ್ಕಳನ್ನ ನೋಡಿಕೊಳ್ಳಲು ಅಲ್ಲಿಗೆ ಯಾರು ಬರುವುದಿಲ್ಲ.

ಈ ಹಿನ್ನೆಲೆಯಲ್ಲಿ ಡೇ ಕೇರ್ ಸೆಂಟರ್ ವಿರುದ್ಧ ಪೋಷಕರು ಆಕ್ರೋಶ ಹೊರಹಾಕಿದ್ದು, ಟ್ವಿಟರ್ ಮೂಲಕ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಸಂಬಂಧ ಸುಬ್ರಹ್ಮಣ್ಯಪುರ ಠಾಣೆಗೆ ನಗರ ಪೊಲೀಸರು ಸೂಕ್ತ ತನಿಖೆ ನಡೆಸುವಂತೆ ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.