ಬಂಡೀಪುರ: ಸಾಕು ನಾಯಿ ಕೊಂದಿತೆಂದು ವಿಷಪ್ರಾಶನ ಮಾಡಿಸಿ ಚಿರತೆಯ ಹತ್ಯೆ
ಸಾಕು ನಾಯಿಯ ಕೊಂದು ಹಾಕಿತೆಂದು ಚಿರತೆಗೆ ವಿಷಪ್ರಾಶನ ಮಾಡಿಸಿ ಹತ್ಯೆ ಮಾಡಿರುವ ಘಟನೆಯೊಂದು ಚಾಮರಾಜನಗರ ಜಿಲ್ಲೆಯ ಬಂಡೀಪುರ ಸಮೀಪದ ಕೂಟನೂರು ಗ್ರಾಮದಲ್ಲಿ ಶುಕ್ರವಾರ ವರದಿಯಾಗಿದೆ.

ಬೆಂಗಳೂರು: ಸಾಕು ನಾಯಿಯ ಕೊಂದು ಹಾಕಿತೆಂದು ಚಿರತೆಗೆ ವಿಷಪ್ರಾಶನ ಮಾಡಿಸಿ ಹತ್ಯೆ ಮಾಡಿರುವ ಘಟನೆಯೊಂದು ಚಾಮರಾಜನಗರ ಜಿಲ್ಲೆಯ ಬಂಡೀಪುರ ಸಮೀಪದ ಕೂಟನೂರು ಗ್ರಾಮದಲ್ಲಿ ಶುಕ್ರವಾರ ವರದಿಯಾಗಿದೆ.
ಈ ಸಂಬಂಧ ಅರಣ್ಯಾಧಿಕಾರಿಗಳು ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ಕೃಷಿ ಕಾರ್ಮಿಕ ರಮೇಶ್ ಎಂದು ಗುರ್ತಿಸಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಜಮೀನು ಮಾಲೀಕ ಜಿ.ಆರ್.ಗೋವಿಂದ ರಾಜು ಎಂಬುವರಿಗೆ ಸೇರಿದ ಕೃಷಿ ಭೂಮಿಯಲ್ಲಿ ಅರಣ್ಯಾಧಿಕಾರಿಗಳು ಚಿರತೆಯ ಶವವನ್ನು ಪತ್ತೆ ಮಾಡಿದ್ದಾರೆ.
ರಮೇಶ್ ಅವರು ಸಾಕಿದ್ದ ನಾಯಿಯನ್ನು ನಾಲ್ಕು ದಿನಗಳ ಹಿಂದೆ ಮೂರು ವರ್ಷದ ಹೆಣ್ಣು ಚಿರತೆ ಕೊಂದು ಹಾಕಿತ್ತು. ಇದರಿಂದ ಕುಪಿತಗೊಂಡ ರಮೇಶ್, ಚಿರತೆ ಭಾಗಶಃ ತಿಂದು ಬಿಟ್ಟಿದ್ದ ನಾಯಿಯ ಮೃತದೇಹಕ್ಕೆ ಕೀಟನಾಶಕವನ್ನು ಸಿಂಪಡಿಸಿದ್ದ. ಇದರಂತೆ ಚಿರತೆ ಮತ್ತೆ ಬಂದು ಮೃತದೇಹವನ್ನು ತಿಂದಿದೆ. ಈ ವೇಳೆ ವಿಷಪ್ರಾಶನದಿಂದ ಮೃತಪಟ್ಟಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


