ಸೋಮಣ್ಣ ಸೋಲಿಗೆ ಕಾಂಗ್ರೆಸ್‌ನ ಗ್ಯಾರಂಟಿಗಳು ಕಾರಣವಲ್ಲ, ಪಕ್ಷದ ನಾಯಕರೇ ಕಾರಣ!
ಕಾಂಗ್ರೆಸ್ ಗ್ಯಾರಂಟಿಗಳಿಂದ ವಿ ಸೋಮಣ್ಣ ಸೋತಿಲ್ಲ. ಬದಲಾಗಿ ಪಕ್ಷದ ನಾಯಕರಿಂದಲೇ ಸೋಲು ಅನುಭವಿಸಿದರು ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

ಚಾಮರಾಜನಗರ: ಕಾಂಗ್ರೆಸ್ ಗ್ಯಾರಂಟಿಗಳಿಂದ ವಿ ಸೋಮಣ್ಣ ಸೋತಿಲ್ಲ. ಬದಲಾಗಿ ಪಕ್ಷದ ನಾಯಕರಿಂದಲೇ ಸೋಲು ಅನುಭವಿಸಿದರು ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.
ಚಾಮರಾಜನಗರದ ಡಾ ಬಿಆರ್ ಅಂಬೇಡ್ಕರ್ ಭವನದಲ್ಲಿ ಗುರುವಾರ ನಡೆದ ಬಿಜೆಪಿಯ ಸೋಲಿನ ಪರಾಮರ್ಶೆ ಸಭೆಯಲ್ಲಿ ಬಿಜೆಪಿ ನಾಯಕರ ವಿರುದ್ಧವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಸಭೆಯ ಆರಂಭದಲ್ಲಿಯೇ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದರು. ಮಾಜಿ ಸಚಿವ ವಿ ಸೋಮಣ್ಣ ಅನುಯಾಯಿಗಳು ಸಭೆಯಲ್ಲಿ ತಮಗೂ ಮಾತನಾಡಲು ಅವಕಾಶ ಕೊಡಬೇಕು ಎಂದು ಆಗ್ರಹಿಸಿದರು.
ಚಾಮರಾಜನಗರದಲ್ಲಿ ಸತತ ಮೂರನೇ ಬಾರಿ ಬಿಜೆಪಿ ಸೋತಿದೆ. ಮೊದಲ ಬಾರಿ ಸೋತಾಗಾಲೂ ಹೀಗೆ ಹೇಳಿದಿರಿ, ಎರಡನೇ ಬಾರಿ ಸೋತಾಗಲೂ ಪರಾಮರ್ಶೆ ಎಂದು ಹೇಳಿದ್ದಿರಿ. ಈಗಲೂ ಅದನ್ನೇ ಮಾಡುತ್ತೀದ್ದೀರಿ? ಎಂದು ಕಾರ್ಯಕರ್ತರು ಕಿಡಿಕಾರಿದರು.
ಇದನ್ನೂ ಓದಿ: ಲೋಕಸಭಾ ಚುನಾವಣೆ ಮೇಲೆ ಕಣ್ಣು: ಮನೆ-ಮನೆಗೆ ತೆರಳಿ ಕಾಂಗ್ರೆಸ್ ವೈಫಲ್ಯ ಕುರಿತು ಜಾಗೃತಿ ಮೂಡಿಸಲು ಬಿಜೆಪಿ ಮುಂದು!
ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿಗಳಿಂದ ಸೋಮಣ್ಣ ಸೋತಿಲ್ಲ, ಪಕ್ಷದ ನಾಯಕರಿಂದಲೇ ಅವರು ಚಾಮರಾಜನಗರದಲ್ಲಿ ಸೋತದ್ದು ಎಂದು ಬೇಸರ ಹೊರಹಾಕಿದರು.
ಈ ವೇಳೆ ಮಾಜಿ ಸಿಎಂ ಡಿವಿ ಸದಾನಂದಗೌಡ ಅವರು ಮಾತನಾಡಿ, ಸೋಮಣ್ಣ ಅವರು ಎರಡೂ ಸ್ಥಾನಗಳಿಂದ ಸೋತಿದ್ದರಿಂದ ನೋವಾಗಿದೆ. ಇದರಿಂದ ಸೋಮಣ್ಣ ಕೋಪಗೊಂಡಿಲ್ಲ, ಆದರೆ, ನೊಂದಿದ್ದಾರೆ. ನಾನು ಕೋರ್ ಕಮಿಟಿಯಲ್ಲಿದ್ದೇನೆ, ನಿಮ್ಮ ಅಭಿಪ್ರಾಯಗಳನ್ನು ನಾಯಕರಿಗೆ ಮುಟ್ಟಿಸುತ್ತೇನೆ, ಮುಂದೆ ಈ ರೀತಿ ಆಗಬಾರದು ಎಂದು ಒತ್ತಾಯಿಸುತ್ತೇನೆ ಎಂದು ಭರವಸೆಯನ್ನು ನೀಡಿದರು. ಸಭೆಗೆ ಪರಾಜಿತ ಅಭ್ಯರ್ಥಿ ಹಾಗೂ ಮಾಜಿ ಸಚಿವ ವಿ ಸೋಮಣ್ಣ ಗೈರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


