ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮಾನವ ಹಕ್ಕುಗಳ ಆಯೋಗದಿಂದ ತನಿಖೆಗೆ ಕುಟುಂಬಸ್ಥರು ಮನವಿ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ 2012ರಲ್ಲಿ ಅತ್ಯಾಚಾರವೆಸಗಿ ಹತ್ಯೆಗೀಡಾದ ಸೌಜನ್ಯಳ ಕುಟುಂಬಸ್ಥರು ರಾಜ್ಯ ಮಾನವ ಹಕ್ಕುಗಳ ಆಯೋಗದಿಂದ ಪ್ರಕರಣದ ಮರುತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲು ನಿರ್ಧರಿಸಿದ್ದಾರೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ 2012ರಲ್ಲಿ ಅತ್ಯಾಚಾರವೆಸಗಿ ಹತ್ಯೆಗೀಡಾದ ಸೌಜನ್ಯಳ ಕುಟುಂಬಸ್ಥರು ರಾಜ್ಯ ಮಾನವ ಹಕ್ಕುಗಳ ಆಯೋಗದಿಂದ ಪ್ರಕರಣದ ಮರುತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲು ನಿರ್ಧರಿಸಿದ್ದಾರೆ.
ಶುಕ್ರವಾರ ಇಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಬೆಳ್ತಂಗಡಿಯ ಪ್ರಜಾಪ್ರಭುತ್ವ ವೇದಿಕೆಯ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯ ಅವರ ಕುಟುಂಬಕ್ಕೆ ನ್ಯಾಯ ಒದಗಿಸುವಲ್ಲಿ ಸಿಒಡಿ ಮತ್ತು ಸಿಬಿಐನಂತಹ ತನಿಖಾ ಸಂಸ್ಥೆಗಳು ವಿಫಲವಾಗಿವೆ. ಪ್ರಕರಣವನ್ನು ದುರ್ಬಲಗೊಳಿಸಲು "ಪ್ರಬಲ" ಜನರಿಂದ ಏಜೆನ್ಸಿಗಳ ಮೇಲೆ ಒತ್ತಡ ಹೇರಲಾಗಿದೆ ಎಂದು ಆರೋಪಿಸಿದರು.
ಧರ್ಮಸ್ಥಳದ ಪ್ರಭಾವಿ ಕುಟುಂಬದ ಕೆಲವರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಅವರು ಎಲ್ಲಾ ಪುರಾವೆಗಳನ್ನು ನಾಶಪಡಿಸಿದ್ದು, ಕೆಲವು ಪ್ರತ್ಯಕ್ಷದರ್ಶಿಗಳು ಸಾವನ್ನಪ್ಪಿದ್ದಾರೆ. ಪ್ರತ್ಯಕ್ಷದರ್ಶಿಗಳನ್ನು ಕೊಲ್ಲಲಾಗಿದೆ ಎಂಬುದು ನಮಗೆ ಗೊತ್ತಿದೆ. ಸಂತೋಷ್ ರಾವ್ ಪ್ರಮುಖ ಆರೋಪಿ ಅಲ್ಲ. ಇತ್ತೀಚೆಗೆ ಸಿಬಿಐ ನ್ಯಾಯಾಲಯದ ತೀರ್ಪು ಅದನ್ನು ಸಾಬೀತುಪಡಿಸಿದೆ ತನಿಖಾ ತಂಡಗಳ ಕಡೆಯಿಂದ ಹಲವು ಲೋಪಗಳಾಗಿವೆ' ಎಂದು ತಿಮರೋಡಿ ಹೇಳಿದರು. '
'ಸೌಜನ್ಯಳ ತಾಯಿ ದೂರು ದಾಖಲಿಸಲು ಹೋದಾಗ ಬೆಳ್ತಂಗಡಿ ಪೊಲೀಸರು ಅದನ್ನು ದಾಖಲಿಸಿಕೊಳ್ಳಲು ಮುಂದಾಗಲಿಲ್ಲ. ಅಂದಿನ ತನಿಖಾಧಿಕಾರಿ ಯೋಗೀಶ್ ಕುಮಾರ್ ಸಾಕ್ಷ್ಯ ನಾಶಪಡಿಸುವ ಮೂಲಕ ಪ್ರಕರಣವನ್ನು ಮುಚ್ಚಿ ಹಾಕಿದ್ದರು. ತನಿಖಾ ಸಂಸ್ಥೆಗಳು ಪ್ರಭಾವಿ ಕುಟುಂಬದ ಕೆಲವರನ್ನು ನಾರ್ಕೋ ಪರೀಕ್ಷೆಗೆ ಒಳಪಡಿಸಿಲ್ಲ ಅಥವಾ ಡಿಎನ್‌ಎ ಪರೀಕ್ಷೆಯನ್ನೂ ನಡೆಸಿಲ್ಲ' ಎಂದು ಅವರು ಆರೋಪಿಸಿದರು.
ಸಂತೋಷ್ ರಾವ್ ಪ್ರಮುಖ ಆರೋಪಿ ಅಲ್ಲ ಎಂದು ಖಚಿತಪಡಿಸಲು ಸಿಬಿಐ 11 ವರ್ಷ ತೆಗೆದುಕೊಂಡಿದೆ ಎಂದು ವಾಗ್ದಾಳಿ ನಡೆಸಿದ ಅವರು, ಧರ್ಮಸ್ಥಳದ ಪ್ರಭಾವಿ ಕುಟುಂಬದ ಸದಸ್ಯರನ್ನು ಸತ್ಯ ಪರೀಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು. ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ, ಒಕ್ಕಲಿಗ ಸಮುದಾಯದ ಭಕ್ತರು ಪ್ರಕರಣದ ವಿರುದ್ಧ ಹೋರಾಡುವಂತೆ ಮನವಿ ಮಾಡಿದರು. ನ್ಯಾಯವಾದಿ ಅಂಬಿಕಾ ನಾಯಕ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


