ಶಕ್ತಿ ಯೋಜನೆ: ಮಹಿಳಾ ಪ್ರಯಾಣಿಕರೊಂದಿಗೆ ದುರ್ವರ್ತನೆ ತೋರಿದರೆ ಶಿಸ್ತು ಕ್ರಮ; ಸಾರಿಗೆ ಇಲಾಖೆ ಎಚ್ಚರಿಕೆ
ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷೆಯ ಶಕ್ತಿ ಯೋಜನೆ ಜೂನ್ 11 ರಂದು ಜಾರಿಗೆ ಬಂದಿದ್ದು, ಮಹಿಳೆಯರು ಸಂತಸದಿಂದ ಬಸ್ನಲ್ಲಿ ಪ್ರಯಾಣಿಸುತ್ತಿದ್ದಾರೆ. ಯೋಜನೆ ಜಾರಿಯಾದ ಬಳಿಕ ಮಹಿಳೆಯರೊಂದಿಗೆ ಬಸ್ ಗಳ ನಿರ್ವಾಹಕರು, ಚಾಲಕರು ದುರ್ವರ್ತನೆ ತೋರುತ್ತಿರುವ ಘಟನೆಗಳು ವರದಿಯಾಗುತ್ತಲೇ ಇದ್ದು, ಈ ಕುರಿತು ಸಾರಿಗೆ ಇಲಾಖೆ ಎಚ್ಚರಿಕೆಯೊಂದನ್ನು ನೀಡಿದೆ.

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷೆಯ ಶಕ್ತಿ ಯೋಜನೆ ಜೂನ್ 11 ರಂದು ಜಾರಿಗೆ ಬಂದಿದ್ದು, ಮಹಿಳೆಯರು ಸಂತಸದಿಂದ ಬಸ್ನಲ್ಲಿ ಪ್ರಯಾಣಿಸುತ್ತಿದ್ದಾರೆ. ಯೋಜನೆ ಜಾರಿಯಾದ ಬಳಿಕ ಮಹಿಳೆಯರೊಂದಿಗೆ ಬಸ್ ಗಳ ನಿರ್ವಾಹಕರು, ಚಾಲಕರು ದುರ್ವರ್ತನೆ ತೋರುತ್ತಿರುವ ಘಟನೆಗಳು ವರದಿಯಾಗುತ್ತಲೇ ಇದ್ದು, ಈ ಕುರಿತು ಸಾರಿಗೆ ಇಲಾಖೆ ಎಚ್ಚರಿಕೆಯೊಂದನ್ನು ನೀಡಿದೆ.
ಉಚಿತವಾಗಿ ಪ್ರಯಾಣಿಸುವ ಮಹಿಳೆಯರೊಂದಿಗೆ ಅಗೌರವದಿಂದ ನಡೆದುಕೊಂಡ ದೂರುಗಳು ಬಂದಿದ್ದೇ ಆದರೆ, ಅಂತರ ಬಸ್ ನಿರ್ವಾಹಕ ಅಥವಾ ಚಾಲಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಇಲಾಖೆ ಸುತ್ತೋಲೆ ಹೊರಡಿಸಿದೆ.
ಶಕ್ತಿ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ನಿಗಮದ ಚಾಲನಾ ಸಿಬ್ಬಂದಿ ಪರಿಶ್ರಮ ಹೆಚ್ಚಿನ ಮಟ್ಟದಲ್ಲಿದೆ. ಆದರೆ, ಕೆಲವೊಂದು ಅಹಿತಕರ ಘಟನೆಗಳು ಈ ಮಹತ್ವದ ಯೋಜನೆಯ ಬಗ್ಗೆ ಭಿನ್ನಾಭಿಪ್ರಾಯಗಳು ಮೂಡುವಂತೆ ಮಾಡುತ್ತಿದೆ. ಚಾಲನಾ ಸಿಬ್ಬಂದಿಗಳು ನಿಗಮದ ಸಾರಿಗೆಗಳಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸಬೇಕು. ಈ ಬಗ್ಗೆ ಮಹಿಳಾ ಪ್ರಯಾಣಿಕರಿಂದ ಯಾವುದೇ ದೂರುಗಳಿಗೆ ಅವಕಾಶ ನೀಡದಂತೆ ಕರ್ತವ್ಯ ನಿರ್ವಹಿಸಬೇಕು.
ಮಹಿಳೆಯರು ಇರುವ ಬಸ್ ನಿಲ್ದಾಣ/ಬಸ್ ನಿಲುಗಡೆ ಸ್ಥಳಗಳಲ್ಲಿ ಬಸ್ ನಿಲ್ಲಿಸದೇ ಇರುವುದು ಅಥವಾ ಮಹಿಳಾ ಪ್ರಯಾಣಿಕರಿಗೆ ಉಚಿತವಾಗಿ ಪ್ರಯಾಣಿಸುವ ಕುರಿತು ಅಪಹಾಸ್ಯ ಮಾಡುವುದು, ಇನ್ನಿತರೆ ರೀತಿಯಲ್ಲಿ ಮಹಿಳೆಯರೊಂದಿಗೆ ಅಗೌರವದಿಂದ ನಡೆದುಕೊಳ್ಳುತ್ತಿರುವ ಪ್ರಕರಣಗಳ ಘಟನೆಗಳು ಬೆಳಕಿಗೆ ಬಂದಿವೆ. ಈ ರೀತಿ ಘಟನೆಗಳು ಮತ್ತೆ ಮರುಕಳಿಸಬಾರದು. ಒಂದು ವೇಳೆ ಅನುಚಿತವಾಗಿ ಮಹಿಳೆಯರೊಂದಿಗೆ ವರ್ತಿಸುವುದು ಅಪಹಾಸ್ಯ ಮಾಡುತ್ತಿರುವ ಬಗ್ಗೆ ದೂರು ಬಂದರೆ ಅಂತಹ ವ್ಯಕ್ತಿಗಳ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದೆ.
“ಮಹಿಳೆಯರಿಗೆ ವಿತರಿಸುವ ಟಿಕೇಟ್ ಮೊತ್ತವನ್ನು ಸಾರಿಗೆ ಆದಾಯವೆಂದು ಪರಿಗಣಿಸಲಾಗುತ್ತಿದೆ. ಈ ಹಿನ್ನೆಲೆ, ನಿಗಮದ ಚಾಲಕ ಮತ್ತು ನಿರ್ವಾಹಕರುಗಳು ನಿಗದಿತ ಎಲ್ಲ ಬಸ್ ನಿಲ್ದಾಣ/ಬಸ್ ನಿಲುಗಡೆ ಸ್ಥಳಗಳಲ್ಲಿ ನಿಲುಗಡೆ ನೀಡಿ, ಪ್ರಯಾಣಿಕರನ್ನು ವಿಶೇಷವಾಗಿ ಮಹಿಳೆಯರು/ವಿದ್ಯಾರ್ಥಿಗಳನ್ನು ಹತ್ತಿಸಿ/ಇಳಿಸಬೇಕು” ಎಂದು ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


