ಕ್ಷುಲ್ಲಕ ಕಾರಣಕ್ಕೆ ಜಗಳ: ಸ್ನೇಹಿತರಿಂದಲೇ ಯುವಕನ ಹತ್ಯೆ
ಕ್ಷುಲ್ಲಕ ಕಾರಣಕ್ಕೆ ಜಗಳ ಶುರುವಾಗಿ ಸ್ನೇಹಿತರೇ ಚಾಕುವಿನಿಂದ ಇರಿದು ಯುವಕನನ್ನು ಕೊಲೆ ಮಾಡಿರುವ ಭೀಕರ ಘಟನೆ ನಗರದ ಕಸವಿನಹಳ್ಳಿ ಮುಖ್ಯರಸ್ತೆಯ ಹರಳೂರು ಬಳಿ ನಡೆದಿದೆ.

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಜಗಳ ಶುರುವಾಗಿ ಸ್ನೇಹಿತರೇ ಚಾಕುವಿನಿಂದ ಇರಿದು ಯುವಕನನ್ನು ಕೊಲೆ ಮಾಡಿರುವ ಭೀಕರ ಘಟನೆ ನಗರದ ಕಸವಿನಹಳ್ಳಿ ಮುಖ್ಯರಸ್ತೆಯ ಹರಳೂರು ಬಳಿ ನಡೆದಿದೆ.
ನೇಪಾಳ ಮೂಲದ ಡೇವಿಡ್(20) ಮೃತ ಯುವಕ. ಹರಳೂರಿನಲ್ಲಿ ಸಹೋದರನೊಂದಿಗೆ ವಾಸವಿದ್ದ ಡೇವಿಡ್, ಹೋಟೆಲ್‌ನಲ್ಲಿ ಅಡುಗೆ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ತಿಂಗಳ ಹಿಂದೆ ಕೆಲಸ ಬಿಟ್ಟಿದ್ದ.
ಇದನ್ನೂ ಓದಿ: ವೇಗವಾಗಿ ಬಂದ ಕಾರು ಡಿಕ್ಕಿ: ಪಾದಚಾರಿ ದುರ್ಮರಣ
ಶನಿವಾರ ರಾತ್ರಿ ಕಸವನಹಳ್ಳಿಯ ಬೇಕರಿಯೊಂದರ ಬಳಿ ನಿಂತಿದ್ದಾಗ ಡೇವಿಡ್ ಮೇಲೆ ಚೂರಿಯಿಂದ ದಾಳಿ ನಡೆಸಲಾಗಿದೆ. ಎದೆ ಮತ್ತು ಹೊಟ್ಟೆಗೆ ಚಾಕುವಿನಿಂದ ಇರಿದು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಅಷ್ಟರಲ್ಲಾಗಲೇ ಮೃತಪಟ್ಟಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕ್ಷುಲ್ಲಕ ವಿಚಾರಕ್ಕೆ ಡೇವಿಡ್ ಸ್ನೇಹಿತರೊಂದಿಗೆ ಜಗಳವಾಡಿದ್ದ. ಒಬ್ಬಾತನ ಮೇಲೆ ಹಲ್ಲೆಯನ್ನು ನಡೆಸಿದ್ದ. ಘಟನೆ ಬಳಿಕ ಡೇವಿಡ್ ಮೇಲೆ ಕೆಂಡಾಮಂಡಲಗೊಂಡಿದ್ದ ಸ್ನೇಹಿತರು ಹತ್ಯೆ ನಡೆಸಲು ಸಂಚು ರೂಪಿಸಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.
ಘಟನೆ ಸಂಬಂಧ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


