ಜುಲೈ 2ರ ಭಾನುವಾರ ಬೆಳಗ್ಗೆ ಎರಡು ಗಂಟೆ ಕಾಲ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಸ್ಥಗಿತ
ನೇರಳೆ ಮಾರ್ಗದಲ್ಲಿ ಜುಲೈ 2ರ ಭಾನುವಾರ ನಮ್ಮ ಮೆಟ್ರೋ ಸಂಚಾರ ತಾತ್ಕಾಲಿಕವಾಗಿ ಎರಡು ಗಂಟೆ ಸ್ಥಗಿತವಾಗಲಿದೆ.

ಬೆಂಗಳೂರು: ನೇರಳೆ ಮಾರ್ಗದಲ್ಲಿ ಜುಲೈ 2ರ ಭಾನುವಾರ ನಮ್ಮ ಮೆಟ್ರೋ ಸಂಚಾರ ತಾತ್ಕಾಲಿಕವಾಗಿ ಎರಡು ಗಂಟೆ ಸ್ಥಗಿತವಾಗಲಿದೆ.
ಟ್ರಿನಿಟಿ-ಎಂ.ಜಿ ರಸ್ತೆ ಮೆಟ್ರೋ ನಡುವೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ MG ರಸ್ತೆ ಮೆಟ್ರೋದಿಂದ ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಭಾನುವಾರ ಎರಡು ಗಂಟೆಗಳ ಕಾಲ ನಮ್ಮ ಮೆಟ್ರೋ ಸಂಚರಿಸುವುದಿಲ್ಲ. ಈ ಬಗ್ಗೆ ಇಂದು( ಜೂನ್ 30) ಬಿಎಂಆರ್ಸಿಎಲ್ ಪ್ರಕಟಣೆ ಮೂಲಕ ಮಾಹಿತಿ ನಿಡಿದೆ.
ಬೆಂಗಳೂರು ಮೆಟ್ರೋ ರೈಲು ನಿಗಮವು ಜುಲೈ 2 ರಂದು (ಭಾನುವಾರ) ಟ್ರಿನಿಟಿ ಮತ್ತು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳುತ್ತಿದೆ. ಈ ಕಾಮಗಾರಿಯನ್ನು ನಿರ್ವಹಿಸಲು ನೇರಳೆ ಮಾರ್ಗದ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಬೆಳಗ್ಗೆ 7 ಗಂಟೆಯಿಂದ 9 ಗಂಟೆ (ಎರಡು ಗಂಟೆ ಮಾತ್ರ) ಮೆಟ್ರೋ ಸಂಚಾರ ಇರುವುದಿಲ್ಲ.
ಪ್ರಯಾಣಿಕರಿಗೆ ಇದರಿಂದಾಗುವ ಅನಾನುಕೂಲತೆಗೆ ನಮ್ಮ ಮೆಟ್ರೋ ವಿಷಾದಿಸಿದೆ ಎಂದು ಬಿಎಂಆರ್ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.
ಕೆಂಗೇರಿ ಮತ್ತು ಎಂ.ಜಿ ರಸ್ತೆ, ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ಕೃಷ್ಣರಾಜಪುರ ಮತ್ತು ವೈಟ್ ಫೀಲ್ಡ್ (ಕಾಡುಗೋಡಿ) ವಿಭಾಗಗಳ ರೈಲುಗಳ ಸೇವೆಯು ಆಯಾ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 07:00 ಗಂಟೆಗೆ ವೇಳಾಪಟ್ಟಿಯ ಪ್ರಕಾರ ಸಂಚರಿಸಲಿದೆ. ನಮ್ಮ ಮೆಟ್ರೋ ಪ್ರಯಾಣಿಕರು ಸದರಿ ಬದಲಾವಣೆಯನ್ನು ಗಮನಿಸಬೇಕೆಂದು ಕೋರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


