ಮತ್ತೆ 15 ದಿನ ಸಂಚಾರಿ ದಂಡ ಪಾವತಿಗೆ ಶೇ.50 ವಿನಾಯಿತಿ ನೀಡಿದ ಸರ್ಕಾರ, ಆದರೆ ಷರತ್ತು ಅನ್ವಯ!!
ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ಇ–ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರಷ್ಟು ರಿಯಾಯಿತಿಯನ್ನು ಮತ್ತೊಮ್ಮೆ ನೀಡಿ ಸರ್ಕಾರ ಆದೇಶ ಹೊರಡಿಸಿದ್ದು, ನಾಳೆಯಿಂದಲೇ ರಿಯಾಯಿತಿಯಲ್ಲಿ ದಂಡ ಪಾವತಿಗೆ ಅವಕಾಶ ಕಲ್ಪಿಸಲಾಗಿದೆ.

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ಇ–ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರಷ್ಟು ರಿಯಾಯಿತಿಯನ್ನು ಮತ್ತೊಮ್ಮೆ ನೀಡಿ ಸರ್ಕಾರ ಆದೇಶ ಹೊರಡಿಸಿದ್ದು, ನಾಳೆಯಿಂದಲೇ ರಿಯಾಯಿತಿಯಲ್ಲಿ ದಂಡ ಪಾವತಿಗೆ ಅವಕಾಶ ಕಲ್ಪಿಸಲಾಗಿದೆ.
ಹೌದು.. ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ (Traffic Fine) ಉಳಿಸಿಕೊಂಡಿರುವ ವಾಹನ ಸವಾರರು ದಂಡ ಪಾವತಿಸಲು ಶೇ 50ರ ರಿಯಾಯಿತಿ ನೀಡಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ಅಂಥದ್ದೇ ಅವಕಾಶ ನೀಡಿದೆ. ಶೇ 50ರಷ್ಟು ದಂಡ ಪಾವತಿಗೆ ಮಾರ್ಚ್ 4ರಿಂದ 15 ದಿನಗಳ ಕಾಲಾವಕಾಶ ನೀಡಿದೆ.
ಷರತ್ತು ಅನ್ವಯ
11-02-2023ರ ಒಳಗಾಗಿ ಅನ್ವಯವಾಗುವ ಪ್ರಕರಣಗಳಿಗೆ ಮಾತ್ರ ಒಂದು ಬಾರಿಯ ಕ್ರಮವಾಗಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರ ರಿಯಾಯಿತಿ ನೀಡಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. 2023ರ ಫೆಬ್ರುವರಿ 11ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗಲಿದೆ. ಈ ರಿಯಾಯಿತಿಯು ಶನಿವಾರದಿಂದ(ಮಾರ್ಚ್ 4) 15 ದಿನಗಳವರೆಗೆ ಇತ್ಯರ್ಥಪಡಿಸಿಕೊಂಡು ದಂಡ ಪಾವತಿಸುವ ಪ್ರಕರಣಗಳಿಗೆ ಮಾತ್ರ ದೊರಕಲಿದೆ. ಕಾನೂನು ಇಲಾಖೆ ಮತ್ತು ಆರ್ಥಿಕ ಇಲಾಖೆಯ ಸಹಮತಿ ಪಡೆದು ಈ ಆದೇಶ ಹೊರಡಿಸಲಾಗುತ್ತಿದೆ ಎಂದು ಸಾರಿಗೆ ಇಲಾಖೆ ಆದೇಶದಲ್ಲಿ ತಿಳಿಸಿದೆ.
ಈ ಹಿಂದೆ ಫೆಬ್ರವರಿ 11ರ ವರೆಗೆ 15 ದಿನಗಳ ಕಾಲ ಶೇ 50ರ ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ನೀಡಲಾಗಿತ್ತು. ಈ ಕೊಡುಗೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ಕೆಲವಲು ದಂಡಪಾವತಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ರಿಯಾಯಿತಿ ದರದಲ್ಲಿ ದಂಡ ಕಟ್ಟುವ ಕಾಲಾವಕಾಶವನ್ನು ವಿಸ್ತರಿಸಬೇಕು ಎಂಬ ಬೇಡಿಕೆ ವ್ಯಕ್ತವಾಗಿತ್ತು.

ಟ್ರಾಫಿಕ್ ಫೈನ್ ಎಲ್ಲೆಲ್ಲಿ ಪಾವತಿಸಬಹುದು?
ಕರ್ನಾಟಕ ವನ್ ವೆಬ್ಸೈಟ್ನಲ್ಲಿ ವಿವರಗಳನ್ನು ಪಡೆದು ದಂಡ ಪಾವತಿಸಬಹುದಾಗಿದೆ. ಪೇಟಿಎಂ ಆ್ಯಪ್ ಮೂಲಕವೂ ನಿಯಮ ಉಲ್ಲಂಘನೆಯ ವಿವರಗಳನ್ನು ಪಡೆದು ಪಾವತಿಸಬಹುದಾಗಿದೆ. ಹತ್ತಿರ ಸಂಚಾರ ಪೊಲೀಸ್ ಠಾಣೆಗಳಲ್ಲಿ ನಿಮ್ಮ ವಾಹನದ ನೊಂದಣಿ ಸಂಖ್ಯೆಯ ವಿವರಗಳನ್ನು ಒದಗಿಸಿ ದಂಡ ಪಾವತಿಸಿ ರಶೀದಿಯನ್ನು ಪಡೆದುಕೊಳ್ಳಬಹುದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


