ಉಡುಪಿ ಕೃಷ್ಣ ಮಠಕ್ಕೆ ಭೂಮಿ ಕೊಟ್ಟಿದ್ದು ಮುಸಲ್ಮಾನ: ಕಾಂಗ್ರೆಸ್ ಮುಖಂಡನ ಹೇಳಿಕೆ ವಿವಾದಕ್ಕೆ ಎಡೆ
ಉಡುಪಿಯ ಕೃಷ್ಣಮಠಕ್ಕೆ ಭೂಮಿ ನೀಡಿದ್ದು ಮುಸಲ್ಮಾನರು ಎಂದು ಕಾಂಗ್ರೆಸ್ ಮುಖಂಡರೊಬ್ಬರು ನೀಡಿರುವ ಹೇಳಿಕೆ ಇದೀಗ ವಿವಾದ ಸೃಷ್ಟಿಸಿದೆ.

ಮಂಗಳೂರು/ಉಡುಪಿ: ಉಡುಪಿಯ ಕೃಷ್ಣಮಠಕ್ಕೆ ಭೂಮಿ ನೀಡಿದ್ದು ಮುಸಲ್ಮಾನರು ಎಂದು ಕಾಂಗ್ರೆಸ್ ಮುಖಂಡರೊಬ್ಬರು ನೀಡಿರುವ ಹೇಳಿಕೆ ಇದೀಗ ವಿವಾದ ಸೃಷ್ಟಿಸಿದೆ.
ಕಾಂಗ್ರೆಸ್ ಮುಖಂಡ ಹಾಗೂ ಮೂಡುಬಿದಿರೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಮಿಥುನ್ ರೈ ಅವರು ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.
ಮೂಡುಬಿದಿರೆಯಲ್ಲಿ ಮಸೀದಿಯೊಂದರಲ್ಲಿ ಮಾತನಾಡಿದ್ದ ರೈ, ಉಡುಪಿ ಮಠಕ್ಕೆ ಜಾಗ ಕೊಟ್ಟಿದ್ದು ಮುಸಲ್ಮಾನ ರಾಜರು ಎಂದು ಹೇಳಿದ್ದಾರೆ. ಈ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ಹೇಳಿಕೆ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ. ಈ ವಿಡಿಯೋ ಕುರಿತು ಮಂಗಳವಾರ ಪ್ರತಿಕ್ರಿಯಿಸಿರುವ ಉಡುಪಿಯ ಬಿಜೆಪಿ ಶಾಸಕ ರಘುಪತಿ ಭಟ್, ‘ಶ್ರೀಕೃಷ್ಣ ಮಠಕ್ಕೆ ಯಾವುದೇ ಮುಸ್ಲಿಂ ದೊರೆ ಭೂಮಿಯನ್ನು ದಾನ ಮಾಡಿಲ್ಲ, ಒಬ್ಬ ರಾಮಭೋಜ ಮಠಕ್ಕೆ ಭೂಮಿ ನೀಡಿದ್ದಾರೆ. ಭೂಮಿ ಕೊಟ್ಟ ಬಗ್ಗೆ ಉಲ್ಲೇಖಗಳಿವೆ. ಮುಂದೆ ಆ ಭೂಮಿಯೇ ಕೃಷ್ಣ ಮಠಕ್ಕೆ ಬಳಕೆಯಾಗಿದೆ, ಅನಂತೇಶ್ವರ ದೇಗುಲ ನಂತರ ಕೃಷ್ಣ ಮಠ ನಿರ್ಮಾಣಗೊಂಡಿದೆ. ಸದ್ಯದ ಜಾಮಿಯಾ ಮಸೀದಿ ಕೂಡ ಜಂಗಮರ ಮಠದ ಜಾಗದಲ್ಲಿತ್ತು. ಮುಸಲ್ಮಾನರಿಗೂ ಮಸೀದಿ ಕಟ್ಟಲು ಜಂಗಮರ ಮಠ ಜಾಗ ಕೊಟ್ಟಿದೆ, ಶೋಕಮಾತಾ ಚರ್ಚ್ ಕೃಷ್ಣ ಮಠದವರು ಕೊಟ್ಟ ಲೀಸ್ ಭೂಮಿಯಲ್ಲಿದೆ.
ಕ್ರಿಶ್ಚಿಯನ್ಸ್ ಸಮುದಾಯಕ್ಕೆ ಚರ್ಚ್ಗೆ ಕೃಷ್ಣಾಪುರ ಮಠ ಭೂಮಿ ನೀಡಿದೆ, ಮಿಥುನ್ ರೈ ಯಾವ ಮುಸಲ್ಮಾನ ರಾಜನ ಬಗ್ಗೆ ಮಾತಾಡಿದ್ದಾರೆಂಬುದು ನನಗೆ ಗೊತ್ತಿಲ್ಲ. ಮಿಥುನ್ ರೈ ಅವಕು ಅಯೋಧ್ಯೆಯ ಪರಿಸ್ಥಿತಿ ಬಗ್ಗೆ ಚಿಂತನೆ ಮಾಡಲಿ ಎಂದು ಹೇಳಿದ್ದಾರೆ.
ಈ ನಡುವೆ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ರೈ, ಪತ್ರಿಕೆಗಳಲ್ಲಿ ಬಂದಿದ್ದ ವರದಿ ನೋಡಿ ನಾನು ಹೇಳಿಕೆ ನೀಡಿದ್ದೇನೆ. ನಾನು ಸೌಹಾರ್ದಯುತ ಹೇಳಿಕೆ ನೀಡಿದ್ದೇನೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


