ಮಾರ್ಚ್ 25ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ
ಚಿಕ್ಕಬಳ್ಳಾಪುರ, ಬೆಂಗಳೂರು ಮತ್ತು ದಾವಣಗೆರೆಯಲ್ಲಿ ಆಯೋಜಿಸಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 25 ರಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ.

ಬೆಂಗಳೂರು: ಚಿಕ್ಕಬಳ್ಳಾಪುರ, ಬೆಂಗಳೂರು ಮತ್ತು ದಾವಣಗೆರೆಯಲ್ಲಿ ಆಯೋಜಿಸಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 25 ರಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ.
ಮಾರ್ಚ್ 25 ರಂದು ಬೆಳಿಗ್ಗೆ ನಗರದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಪ್ರಧಾನಿ, ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಲು ಹೆಲಿಕಾಪ್ಟರ್‌ನಲ್ಲಿ ಚಿಕ್ಕಬಳ್ಳಾಪುರಕ್ಕೆ ತೆರಳಲಿದ್ದಾರೆ ಎಂದು ಸರ್ಕಾರದ ಪತ್ರಿಕಾ ಪ್ರಕಟಣೆ ತಿಳಿಸಿದೆ.
ವೈಟ್‌ಫೀಲ್ಡ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲು ಮತ್ತು ಮೆಟ್ರೋ ರೈಲಿನಲ್ಲಿ ಪ್ರಯಾಣಿಸಲು ಮೋದಿ ಮಧ್ಯಾಹ್ನ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.
ನಂತರ ಅವರು ದಾವಣಗೆರೆಗೆ ತೆರಳಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ ದೆಹಲಿಗೆ ಹಾರುವ ಮುನ್ನ ಶಿವಮೊಗ್ಗಕ್ಕೆ ತೆರಳಲಿದ್ದಾರೆ ಎಂದು ಅಧಿಕೃತ ಪತ್ರಿಕಾ ಪ್ರಕಟಣೆ ತಿಳಿಸಿದೆ.
ಈ ವರ್ಷ ಕರ್ನಾಟಕಕ್ಕೆ ಮೋದಿ ಅವರ ಏಳನೇ ಭೇಟಿ ಇದಾಗಿದೆ. ಮಾರ್ಚ್ 12 ರಂದು ಮಂಡ್ಯದಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಮತ್ತು ಧಾರವಾಡದಲ್ಲಿ ಐಐಟಿ ಕ್ಯಾಂಪಸ್ ಉದ್ಘಾಟನೆಗೆ ಪ್ರಧಾನಿ ಕರ್ನಾಟಕಕ್ಕೆ ಬಂದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


