ಬೆಂಗಳೂರು: ಡಾ. ಎಂ.ಹೆಚ್. ಅಂಬರೀಶ್ ರಸ್ತೆ, ನಾಮಫಲಕ ಅನಾವರಣಗೊಳಿಸಿದ ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಬೆಂಗಳೂರಿನ ಮೌರ್ಯ ವೃತ್ತದಿಂದ ಬಸವೇಶ್ವರ ವೃತ್ತದ ವರೆಗಿನ ರೇಸ್ ಕೋರ್ಸ್ ರಸ್ತೆಗೆ ರೆಬೆಲ್ ಸ್ಟಾರ್ ಡಾ.ಎಂ.ಹೆಚ್ ಅಂಬರೀಶ್ ರಸ್ತೆ ಎಂದು ನಾಮಕರಣ ಮಾಡಿ ನಾಮ ಫಲಕ ಅನಾವರಣ ಗೊಳಿಸಿದರು.

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಬೆಂಗಳೂರಿನ ಮೌರ್ಯ ವೃತ್ತದಿಂದ ಬಸವೇಶ್ವರ ವೃತ್ತದ ವರೆಗಿನ ರೇಸ್ ಕೋರ್ಸ್ ರಸ್ತೆಗೆ ರೆಬೆಲ್ ಸ್ಟಾರ್ ಡಾ.ಎಂ.ಹೆಚ್ ಅಂಬರೀಶ್ ರಸ್ತೆ ಎಂದು ನಾಮಕರಣ ಮಾಡಿ ನಾಮಫಲಕ ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಸಂಸದೆ ಸುಮಲತಾ ಅಂಬರೀಶ್, ಪುತ್ರ ಅಭಿಷೇಕ್ ಅಂಬರೀಶ್, ನಟ ರಾಘವೇಂದ್ರ ರಾಜ್ ಕುಮಾರ್, ಫಿಲಂ ಚೇಂಬರ್ ಅಧ್ಯಕ್ಷ ಭಾ.ಮ ಹರೀಶ್, ರಾಕ್ ಲೈನ್ ವೆಂಕಟೇಶ್, ಚಿನ್ನೆಗೌಡರು ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ನಂತರ ಮಾತನಾಡಿದ ಮುಖ್ಯಮಂತ್ರಿ, ರೇಸ್ ಕೋರ್ಸ್ ರಸ್ತೆಯನ್ನು ಅಂಬರೀಶ್ ಅವರ ಹೆಸರಿನಲ್ಲಿ ಅತ್ಯಂತ ಸಂತೋಷದಿಂದ ನಾಮಕರಣ ಮಾಡಿದ್ದೇವೆ. ಇದು ಅವರು ಹೆಚ್ಚು ಓಡಾಡಿದ ಸ್ಥಳ. ಎಲ್ಲ ಅಭಿಮಾನಿಗಳ ಒತ್ತಾಸೆ ಮೇರೆಗೆ ಇವರ ಹೆಸರನ್ನು ಇಟ್ಟಿದ್ದೇವೆ. ಹಲವು ಪ್ರತಿಭೆಯಿರುವ ಮೇರು ವ್ಯಕ್ತಿತ್ವ ಅವರದ್ದು. ಸಿನಿಮಾದಲ್ಲಿ ಸಹಜವಾಗಿ ನಟನೆ ಮಾಡುತ್ತಿದ್ದರು. ಜನರನ್ನು ಹಿಡಿದಿಟ್ಟುಕೊಳ್ಳುವ ವ್ಯಕ್ತಿತ್ವ ಅವರಿಗಿತ್ತು. ಕರ್ನಾಟಕದ ರೆಬಲ್ ಸ್ಟಾರ್, ಎಲ್ಲರ ಮನಸ್ಸನ್ನು ಗೆದ್ದಂತಹ ನೇರ ದಿಟ್ಟ, ನಿರಂತರ ಅಂಬರೀಶ್ ಅವರ ಹೆಸರು ಚಿರಸ್ಥಾಯಿಯಾಗಿ ಉಳಿಯಲಿ ಎಂದರು.
ರೀಲ್ ಆ್ಯಂಡ್ ರಿಯಲ್ ಲೈಫ್ ಎರಡು ಒಂದೆಯಾಗಿದ್ದು, ನೇರ ವ್ಯಕ್ತಿತ್ವ ಅವರದ್ದಾಗಿತ್ತು. ಕ್ರೀಡೆಯಲ್ಲೂ ಪ್ರತಿಭೆಯನ್ನು ಹೊಂದಿದ್ದ ಅವರು, ಸಾರ್ವಜನಿಕ ಜೀವನಕ್ಕೆ ಬಂದಮೇಲೆ ವಸತಿ ಸಚಿವರಾಗಿ ಬಹಳ ಒಳ್ಳೆಯ ಕೆಲಸ ಮಾಡಿದ್ದಾರೆ. ಕಾವೇರಿ ವಿಚಾರ ಬಂದಾಗ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟವರು. ಅಧಿಕಾರ ಅವರನ್ನು ಹುಡುಕಿಕೊಂಡು ಬರುತ್ತಿತ್ತು ಎಂದು ತಿಳಿಸಿದರು.
ನನಗೆ ಇವತ್ತು ಬಹಳ ಸಂತೋಷವಾಗಿದೆ. ಅಂಬರೀಶ್ ಅವರು ನನ್ನ ಮಿತ್ರರು. ಅವರ ಜೀವನ ತೆರೆದ ಪುಸ್ತಕ. ಹಲವಾರು ಬಾರಿ ಬೇಟಿಯಾಗಬೇಕು ಅಂದಾಗ ಅಲ್ಲೇ ರೇಸ್ ಕೋರ್ಸ್ ನಲ್ಲಿ ಇರುತ್ತೇನೆ ಬಾರಯ್ಯ ಎನ್ನುವವರು. ಅವರ ಹೆಸರನ್ನು ಬಿಟ್ಟು ಬೇರೆ ಯಾರ ಹೆಸರು ಕೂಡ ಈ ರಸ್ತೆಗೆ ಸೂಕ್ತವಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


