ರಾಜ್ಯ

ಶಿವಮೊಗ್ಗ: ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ, ಹಲವು ಮಂದಿ ದುರ್ಮರಣ

ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಹಲವು ಮಂದಿ ದುರ್ಮರಣ ಹೊಂದಿರುವ ಘಟನೆ ಶಿವಮೊಗ್ಗದ ಬಳಿ ಗುರುವಾರ ಸಂಜೆ ನಡೆದಿದೆ.

ಶಿವಮೊಗ್ಗ: ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ, ಹಲವು ಮಂದಿ ದುರ್ಮರಣ
ಸಾಂದರ್ಭಿಕ ಚಿತ್ರ
Published On :

ಶಿವಮೊಗ್ಗ: ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಹಲವು ಮಂದಿ ದುರ್ಮರಣ ಹೊಂದಿರುವ ಘಟನೆ ಶಿವಮೊಗ್ಗದ ಬಳಿ ಗುರುವಾರ ಸಂಜೆ ನಡೆದಿದೆ.

ತಾಲೂಕಿನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಚೋರಡಿ ಬಳಿ ಈ ಅಪಘಾತ ಸಂಭವಿಸಿದ್ದು, 4ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆದರೆ, ಮೃತರ ಸಂಖ್ಯೆ ನಿರ್ದಿಷ್ಟವಾಗಿ ತಿಳಿದುಬಂದಿಲ್ಲ.

ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಹಾಗೂ ಶಿವಮೊಗ್ಗದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದ ಎರಡು ಖಾಸಗಿ ಬಸ್ ಗಳ ನಡುವೆ ಚೋರಡಿ ಬಳಿಯ ಕುಮದ್ವತಿ ಸೇತುವೆ ಮೇಲೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಗಾಯಾಳುಗಳ ರಕ್ಷಣೆ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.