ರಾಜ್ಯ

ತುಮಕೂರು: ಯುವತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ವ್ಯಕ್ತಿ ಆತ್ಮಹತ್ಯೆಗೆ ಶರಣು

ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಸಮೀಪದ ಭಟ್ಟರಹಳ್ಳಿ ಗ್ರಾಮದಲ್ಲಿ 27 ವರ್ಷದ ಯುವಕನೊಬ್ಬ ಗುರುವಾರ ಯುವತಿಯೊಬ್ಬಳ ಮೇಲೆ ಮಚ್ಚಿನಿಂದ ಕೊಲ್ಲಲು ಯತ್ನಿಸಿ, ಬಳಿಕ ಕಲ್ಯಾಣಿಯಲ್ಲಿ ಮುಳುಗಿ ಆತ್ಮಹತ್ಯೆ

ತುಮಕೂರು: ಯುವತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ವ್ಯಕ್ತಿ ಆತ್ಮಹತ್ಯೆಗೆ ಶರಣು
ಸಾಂದರ್ಭಿಕ ಚಿತ್ರ
Published On :

ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಸಮೀಪದ ಭಟ್ಟರಹಳ್ಳಿ ಗ್ರಾಮದಲ್ಲಿ 27 ವರ್ಷದ ಯುವಕನೊಬ್ಬ ಗುರುವಾರ ಯುವತಿಯೊಬ್ಬಳ ಮೇಲೆ ಮಚ್ಚಿನಿಂದ ಕೊಲ್ಲಲು ಯತ್ನಿಸಿ, ಬಳಿಕ  ಕಲ್ಯಾಣಿಯಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತ ಯುವಕನನ್ನು ಬಿ.ಎಸ್.ವಿನಯ್ ಕುಮಾರ್ ಎಂದು ಗುರುತಿಸಲಾಗಿದ್ದು, ವೃತ್ತಿಯಲ್ಲಿ ಅರ್ಚಕನಾಗಿದ್ದರು. ವಿನಯ್ ಕುಮಾರ್, ಇತ್ತೀಚಿಗಷ್ಟೇ ದ್ವಿತೀಯ ಪಿಯುಸಿ ಪಾಸ್ ಆಗಿದ್ದ ಕೆ ಜೀವಿತಾ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಆತನ ಪ್ರೀತಿಯನ್ನು ಯುವತಿ ತಿರಸ್ಕರಿಸಿದ್ದರಿಂದ ಈ ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ವಿನಯ್ ಕುಮಾರ್, ಜೀವಿತಾ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದು, ಆಕೆಗೆ ಗಂಭೀರ ಗಾಯಗಳಾಗಿವೆ. ಸದ್ಯ ಯುವತಿ ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. 

ಈ ಸಂಬಂಧ ಹುಳಿಯಾರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.