ಗದಗದಲ್ಲಿ ಭೀಕರ ಸರಣಿ ಅಪಘಾತ: 2 ಬೈಕ್ ಗೆ ಕಾರು ಡಿಕ್ಕಿ, 3 ಸಾವು
ಗದಗದಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು ಕಾರೊಂದು 2 ಬೈಕ್ ಗಳಿಗೆ ಡಿಕ್ಕಿಯಾದ ಪರಿಣಾಮ ಮೂರು ಮಂದಿ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.

ಗದಗ: ಗದಗದಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು ಕಾರೊಂದು 2 ಬೈಕ್ ಗಳಿಗೆ ಡಿಕ್ಕಿಯಾದ ಪರಿಣಾಮ ಮೂರು ಮಂದಿ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.
ಗದಗದ ಅಡವಿಸೋಮಾಪುರ ಗ್ರಾಮದ ಬಳಿ ಈ ಸರಣಿ ಅಪಘಾತ ಸಂಭವಿಸಿದ್ದು, ಶಿಂಗಟಾರಯನಕೇರಿ ತಾಂಡಾ ನಿವಾಸಿ ಶಿವಪ್ಪ ನಾಯ್ಕ್(50), ಛಬ್ಬಿ ತಾಂಡಾ ನಿವಾಸಿ ಶಿವಾನಂದ ಲಮಾಣಿ(33) ಮತ್ತು ಡೋಣಿ ತಾಂಡಾ ನಿವಾಸಿ ಕೃಷ್ಣಪ್ಪ ಚೌಹಾಣ್(31) ಎಂಬುವವರು ಸಾವನ್ನಪ್ಪಿದ್ದಾರೆ.
ಬೈಕ್ನಲ್ಲಿ ತೆರಳುತ್ತಿದ್ದಾಗ ಕಾರು 2 ಬೈಕ್ ಗಳಿಗೆ ಢಿಕ್ಕಿಯಾಗಿದ್ದು, ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತ ಸ್ಥಳದಲ್ಲಿ ಮೃತಪಟ್ಟವರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
ಬೈಕ್ಗಳಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದ್ದು, ಚಾಲಕ ಪರಾರಿ ಆಗಿದ್ದಾನೆ. ಗದಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


