ರಾಜ್ಯ

ಪ್ರಿಯಕರನ ಜೊತೆ ಸೇರಿ ಪತಿಯ ಹತ್ಯೆ: ಆತ್ಮಹತ್ಯೆ ಎಂದು ಬಿಂಬಿಸಿದ್ದ ಪತ್ನಿ ಬಂಧನ

ಪ್ರಿಯಕರನ ಜೊತೆ ಸೇರಿ ಪತಿಯ ಹತ್ಯೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದ ಮಹಿಳೆಯನ್ನು ಕಾಡುಗೋಡಿ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.

ಪ್ರಿಯಕರನ ಜೊತೆ ಸೇರಿ ಪತಿಯ ಹತ್ಯೆ: ಆತ್ಮಹತ್ಯೆ ಎಂದು ಬಿಂಬಿಸಿದ್ದ ಪತ್ನಿ ಬಂಧನ
ಸಂಗ್ರಹ ಚಿತ್ರ
Published On :

ಬೆಂಗಳೂರು: ಪ್ರಿಯಕರನ ಜೊತೆ ಸೇರಿ ಪತಿಯ ಹತ್ಯೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದ ಮಹಿಳೆಯನ್ನು ಕಾಡುಗೋಡಿ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.

ಶಂಕಪುರದ ಅನಿತಾ (24) ಮತ್ತು ಆಕೆಯ ಪ್ರಿಯಕರ ಹರೀಶ್ ಬಂಧಿತ ಆರೋಪಿಯಾಗಿದ್ದಾರೆ. ಆನಂದ್ (37) ಹತ್ಯೆಯಾದ ಪತಿಯಾಗಿದ್ದಾರೆ.

ಮಾ.21ರಂದು ಮನೆಯ ಶೌಚಾಲಯದಲ್ಲಿ ಆನಂದ್ ಅವರ ಶವ ಪತ್ತೆಯಾಗಿತ್ತು. ಅಂದು ಚಾಕುವಿನಿದ ಕೈ ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತೆ ಕಂಡು ಬಂದಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ಆನಂದ್ ಅವರನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿತ್ತು.

ಇದರ ಆಧಾರದ ಮೇಲೆ ಆತನ ಪತ್ನಿ ಅನಿತಾ ಹಾಗೂ ಆಕೆಯ ಪ್ರಿಯಕರ ಹರೀಶ್ ನನ್ನು ವಶಕ್ಕೆ ಪಡೆದ ಪೊಲೀಸರು, ವಿಚಾರಣೆ ನಡೆಸಿದ್ದಾರೆ. ಈ ವೇಳೆ ಸತ್ಯಾಂಶ ಬಯಲಿಗೆ ಬಂದಿದೆ. ಹೀಗಾಗಿ ಇಬ್ಬರನ್ನು ಬಂಧನಕ್ಕೊಳಪಡಿಸಿ ಜೈಲಿಗಟ್ಟಿದ್ದಾರೆ.

ಆರಂಭದಲ್ಲಿ ಆರೋಪಿಗಳು ಆನಂದ್ ಅವರ ಮೃತದೇಹವನ್ನು ರೈಲ್ವೇ ಹಳಿ ಮೇಲೆ ಎಸೆಯಲು ಮುಂದಾಗಿದ್ದರು. ಆದರೆ, ದೇಹ ಭಾರವಿದ್ದ ಕಾರಣ ಆತ್ಮಹತ್ಯೆಯೆಂದು ಬಿಂಬಿಸಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.