ಭಯೋತ್ಪಾದನೆಯಿಂದ ಬಿಜೆಪಿಯ ಯಾವುದೇ ನಾಯಕರೂ ಪ್ರಾಣ ಕಳೆದುಕೊಂಡಿಲ್ಲ: ಸಿಎಂ ಸಿದ್ದರಾಮಯ್ಯ
ಕಾಂಗ್ರೆಸ್ ಭಯೋತ್ಪಾದನಗೆ ಬೆಂಬಲ ನೀಡುತ್ತದೆ ಎಂದು ಬಿಜೆಪಿಯವರು ಹೇಳುತ್ತಾರೆ. ಆದರೆ, ಬಿಜೆಪಿಯ ಯಾವುದೇ ನಾಯಕರೂ ಭಯೋತ್ಪಾದನೆಯಿಂದ ಪ್ರಾಣ ಕಳೆದುಕೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ಭಯೋತ್ಪಾದನಗೆ ಬೆಂಬಲ ನೀಡುತ್ತದೆ ಎಂದು ಬಿಜೆಪಿಯವರು ಹೇಳುತ್ತಾರೆ. ಆದರೆ, ಬಿಜೆಪಿಯ ಯಾವುದೇ ನಾಯಕರೂ ಭಯೋತ್ಪಾದನೆಯಿಂದ ಪ್ರಾಣ ಕಳೆದುಕೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ.
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 32ನೇ ಪುಣ್ಯತಿಥಿ ಅಂಗವಾಗಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಬಿಜೆಪಿ ವಿರುದ್ಧ ಕಿಡಿಕಾರಿದರು.
ಭಯೋತ್ಪಾದನೆ ಬಗ್ಗೆ ಪ್ರಧಾನಿ ಮೋದಿ ಮಾತನಾಡುತ್ತಾರೆ. ಆದರೆ, ಬಿಜೆಪಿಯ ಯಾವುದೇ ನಾಯಕರೂ ಭಯೋತ್ಪಾದನೆಯಿಂದ ಪ್ರಾಣ ಕಳೆದುಕೊಂಡಿಲ್ಲ. ನಾವು ಭಯೋತ್ಪಾದನೆಯನ್ನು ಬೆಂಬಲಿಸುತ್ತೇವೆಂದು ಬಿಜೆಪಿ ನಾಯಕರು ಹೇಳುತ್ತಾರೆ. ಆದರೆ, ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ಅವರಂತಹ ಅನೇಕ ಕಾಂಗ್ರೆಸ್ ನಾಯಕರು ಭಯೋತ್ಪಾದಕ ದಾಳಿಯಲ್ಲಿ ಮಡಿದಿದ್ದಾರೆಂದು ತಿಳಿಸಿದರು.
ಬ್ರಿಟಿಷ್ ಓಡಿಸಿ ಸ್ವತಂತ್ರ ಕೊಡಿಸಿದ್ದು, ಕಾಂಗ್ರೆಸ್ ಪಕ್ಷವಾಗಿದೆ. ಸ್ವತಂತ್ರ ಬೆಲೆ ಕಾಂಗ್ರೆಸ್ ಪಕ್ಷಕ್ಕೆ ಗೊತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಲು ಕಾಂಗ್ರೆಸ್ ಕಾರಣ. ನೆಹರು ಪ್ರಜಾಪ್ರಭುತ್ವ ಬುನಾದಿ ಹಾಕಿದ್ದಾರೆ. ಆದರೆ, ಮೋದಿ ಅಂತಹ ನಾಟಕಾರ ಎಲ್ಲಿ ಸಿಗಲ್ಲ. ಮಾತಿಗೆ ಮಾತ್ರ ಸಬ್ ಕಾ ಸಥ್ ಎನ್ನುತ್ತಾರೆ. ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗಲ್ಲ ಎಂದು ವಾಗ್ದಾಳಿ ನಡೆಸಿದರು,
ಬಿಜೆಪಿಯವರು ಯಾರು ಕೂಡ ಸ್ವತಂತ್ರ ಹೋರಾಟದಲ್ಲಿ ಸತ್ತಿಲ್ಲ. ಬಿಜೆಪಿ ಇರುವವರೆಗೆ ಶಾಂತಿ, ನೆಮ್ಮದಿ ಇರಲ್ಲ. ಬಿಜೆಪಿ ನಾಯಕರು ಜಾತಿ, ಧರ್ಮದ ಹೆಸರಲ್ಲಿ ಸಮಾಜ ಒಡೆಯುತ್ತಿದ್ದಾರೆ. ಇಡೀ ದೇಶದಲ್ಲಿ ಶಾಂತಿ ನೆಲಸಬೇಕು ಎಂದು ಹೇಳಿದರು.
ನಾವು ಬಿಜೆಪಿ ಹಗರಣ ಪ್ರಸ್ತಾಪ ಮಾಡಿದೆವು, ಹೀಗಾಗಿ ಜನರು ನಮಗೆ ಬಹುಮತ ಕೊಟ್ಟಿದ್ದಾರೆ. ಬಿಜೆಪಿ ಕಾಲದಲ್ಲಿ ಮೂರು ಸಿಎಂ ಆಗಿದ್ದರು. ಇದರಿಂದ ಹೇಗೆ ಅಭಿವೃದ್ಧಿ ಸಾಧ್ಯವಾಗುತ್ತದೆ. ನಾವು ಕೊಟ್ಟ ಮಾತು ಉಳಿಸಿಕೊಳ್ಳುವ ಕೆಲಸ ಮಾಡುತ್ತೇವೆ. ಕೊಟ್ಟ ಮಾತು ಉಳಿಸಿಕೊಂಡಿಲ್ಲ ಎಂದು ನಿನ್ನೆ ಬೊಮ್ಮಾಯಿ ಹೇಳಿದ್ದಾರೆ. ಮಿಸ್ಟರ್ ಬೊಮ್ಮಾಯಿ...ನಾವು ಗ್ಯಾರಂಟಿ ಜಾರಿ ಮಾಡುತ್ತೇವೆ. ಮುಂದಿನ ಸಂಪುಟ ಸಭೆಯಲ್ಲಿ ಜಾರಿಗೆ ತಂದೆ ತರುತ್ತೇವೆ. ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ಮಾಡುತ್ತೇವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


