ಬೆಂಗಳೂರು ಮಳೆ: ಕೆಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಯುವತಿ ಸಾವು, ಕ್ಯಾಬ್ ಚಾಲಕನ ಬಂಧನ
ಬೆಂಗಳೂರು ನಗರದ ಕೆಆರ್ ಸರ್ಕಲ್ ಅಂಡರ್ಪಾಸ್ನಲ್ಲಿ ಕಾರು ಮುಳುಗಡೆಯಾಗಿ ಟೆಕ್ಕಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಬೆಂಗಳೂರು ನಗರದ ಕೆಆರ್ ಸರ್ಕಲ್ ಅಂಡರ್ಪಾಸ್ನಲ್ಲಿ ಕಾರು ಮುಳುಗಡೆಯಾಗಿ ಟೆಕ್ಕಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಕೆಆರ್ ಸರ್ಕಲ್ ಅಂಡರ್ಪಾಸ್ನಲ್ಲಿ (KR Circle Underpass tragedy) ಕಾರು ಮುಳುಗಡೆಯಾಗಿ ಟೆಕ್ಕಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಕಾರು ಚಾಲಕನನ್ನು ಹಲಸೂರು ಗೇಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಾರು ಚಾಲಕ ಹರೀಶ್ ಎಂಬಾತನನ್ನು ಹಲಸೂರು ಗೇಟ್ ಠಾಣಾ ಪೊಲೀಸರು ಬಂಧಿಸಿದ್ದು, ಮೃತ ಯುವತಿ ಸಹೋದರ ನೀಡಿದ ದೂರಿನ ಅನ್ವಯ ಕ್ಯಾಬ್ ಚಾಲಕ ಹರೀಶ್ ಮತ್ತು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ಹಾಕಲಾಗಿದೆ ಎಂದು ತಿಳಿದುಬಂದಿದೆ.
ಕಾರಿನಲ್ಲಿದ್ದ ಪ್ರಯಾಣಿಕರು ಬೇಡ ಎಂದು ಹೇಳಿದರೂ ಕೇಳದ ಚಾಲಕ ಹರೀಶ್, ನೀರು ತುಂಬಿದ್ದ ಅಂಡರ್ ಪಾಸ್ನಲ್ಲಿ ಕಾರು ಚಲಾಯಿಸಿದ್ದಾನೆ. ಈ ವೇಳೆ ಕಾರಿನ ಬಾಗಿಲು ಬಂದ್ ಆದ ಹಿನ್ನೆಲೆ ಪ್ರಯಾಣಿಕರು ಕಾರಿನಿಂದ ಇಳಿಯಲು ಯತ್ನಿಸಿದಾಗ ಹರೀಶ್, ಬೇಡ ತಾನೇ ಕಾರ್ ಆನ್ ಮಾಡಿ ಕರೆದೊಯ್ಯುವುದಾಗಿ ಹೇಳಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ದೂರಿನಲ್ಲಿ ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯವೂ ಉಲ್ಲೇಖ
ಅಂತೆಯೇ ಬಿಬಿಎಂಪಿ ಬೆಜವಾಬ್ದಾರಿಗೆ ಅಂಡರ್ ಪಾಸ್ನಲ್ಲಿ ಮಳೆ ನೀರು ತುಂಬಿದೆ ಎಂದು ಹೇಳಲಾಗಿದ್ದು ಈ ಬಗ್ಗೆಯೂ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಭಾನುರೇಖಾ ಸಾವಿಗೆ ಚಾಲಕ ಹರೀಶ್, ಬಿಬಿಎಂಪಿ ಕಾರಣ ಎಂದು ಮೃತಳ ಸಹೋದರ ಬಿಬಿಎಂಪಿ ಹಾಗೂ ಕಾರ್ ಚಾಲಕನ ವಿರುದ್ಧ ದೂರು ನೀಡಿದ್ದರು. ಅದರಂತೆ ಕಾರು ಚಾಲಕನ್ನು ಬಂಧಿಸಲಾಗಿದೆ. ಮಳೆ ಬರುತ್ತದೆ ಎಂಬ ಮುನ್ಸೂಚನೆ ಇದ್ದರೂ ಮುನ್ನೆಚ್ಚರಿಕೆ ಕೈಗೊಳ್ಳದ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಮವಾಗುವುದೇ ಕಾದುನೋಡಬೇಕಿದೆ.
ಏನಿದು ಘಟನೆ?
ನಿನ್ನೆ ಸಂಜೆ ಸುರಿದ ಭಾರೀ ಮಳೆಗೆ ಕೆಆರ್ ಸರ್ಕಲ್ನ ಅಂಡರ್ಪಾಸ್ನಲ್ಲಿ ಸುಮಾರು 5 ಅಡಿಯಷ್ಟು ಎತ್ತರಕ್ಕೆ ನೀರು ತಿಂಬಿತ್ತು. ಹೀಗಿದ್ದರೂ ಆರು ಮಂದಿ ಪ್ರಯಾಣಿಸುತ್ತಿದ್ದ ಕಾರು ಈ ಅಂಡರ್ಪಾಸ್ನಲ್ಲಿ ಹೋಗಿ ಮುಳುಗಿತ್ತು. ಕೂಡಲೇ ಎಚ್ಚೆತ್ತ ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯ ನಡೆಸಿ ಆರು ಮಂದಿಯನ್ನು ರಕ್ಷಿಸಿದ್ದರು. ಈ ಪೈಕಿ ತೀವ್ರ ಅಸ್ವಸ್ಥಗೊಂಡಿದ್ದ ಬಾನುರೇಖಾ ಸಾವನ್ನಪ್ಪಿದ್ದಳು. ಘಟನೆ ನಂತರ ಕಾರು ಚಾಲಕ ಪರಾರಿಯಾಗಿದ್ದನು. ಈ ಘಟನೆ ನಡೆದ ನಂತರ ಅದೇ ನೀರಿನಲ್ಲಿ ಆಟೋವೊಂದು ಮುಳುಗಡೆಯಾಗಿತ್ತು. ಆಟೋ ಚಾಲಕ ಬಚಾವ್ ಆಗಿದ್ದರೆ ಮಹಿಳೆ ಸಂಕಷ್ಟಕ್ಕೆ ಸಿಲುಕಿದ್ದಳು. ಈಕೆಯನ್ನೂ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


