ರಾಜ್ಯ

ಬೆಂಗಳೂರು: ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಕಟ್ಟಡದಿಂದ ಬಿದ್ದು ಆರೋಪಿ ಸಾವು!

ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ವ್ಯಕ್ತಿಯೊಬ್ಬ ಕಟ್ಟಡದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಈ ಘಟನೆ ನಡೆದಿದೆ.

ಬೆಂಗಳೂರು: ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಕಟ್ಟಡದಿಂದ ಬಿದ್ದು ಆರೋಪಿ ಸಾವು!
ಸಂಗ್ರಹ ಚಿತ್ರ
Published On :

ಬೆಂಗಳೂರು: ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ವ್ಯಕ್ತಿಯೊಬ್ಬ ಕಟ್ಟಡದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಈ ಘಟನೆ ನಡೆದಿದೆ.

ಮೃತರನ್ನು ವ್ಯಕ್ತಿಯನ್ನು ಬೇಗೂರು ನಿವಾಸಿ ಮೊಹಮ್ಮದ್ ಹುಸೇನ್ (31) ಎಂದು ಗುರುತಿಸಲಾಗಿದೆ. ಯುವತಿಗೆ ಲಾಂಗ್ ತೋರಿಸಿ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಆತನನ್ನು ಬಂಧನಕ್ಕೊಳಪಡಿಸಿಲು ನಾಲ್ವರು ಪೊಲೀಸರ ತಂಡ ಬುಧವಾರ ಹುಸೇನ್ ಅವರ ಮನೆಗೆ ತೆರಳಿತ್ತು.

ಈ ವೇಳೆ ಪೊಲೀಸರನ್ನು ಕಂಡ ಹುಸೇನ್ ಪರಾರಿಯಾಗಲು ಯತ್ನಿಸಿದ್ದಾನೆ. ಈ ಯತ್ನದಲ್ಲಿ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಬೊಮ್ಮನಹಳ್ಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.