ಬೆಂಗಳೂರು: 3 ದಿನಗಳ ನಂತರ ಕೊನೆಗೂ ಬಲೆಗೆಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಸ್ಥಳೀಯರು
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಸಿಂಗಸಂದ್ರದ ಎಇಸಿಎಸ್ ಲೇಔಟ್ನಲ್ಲಿ ಕಾಣಿಸಿಕೊಂಡಿದ್ದ ಚಿರತೆ ಮೂರು ದಿನಗಳ ನಂತರ ಕೊನೆಗೂ ಬುಧವಾರ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದ್ದು, ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.

ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಸಿಂಗಸಂದ್ರದ ಎಇಸಿಎಸ್ ಲೇಔಟ್ನಲ್ಲಿ ಕಾಣಿಸಿಕೊಂಡಿದ್ದ ಚಿರತೆ ಮೂರು ದಿನಗಳ ನಂತರ ಕೊನೆಗೂ ಬುಧವಾರ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದ್ದು, ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.
ಅಕ್ಟೋಬರ್ 27 ರಂದು ರಾತ್ರಿ ಚಿರತೆ ಅಪಾರ್ಟ್ಮೆಂಟ್ ಸಮುಚ್ಚಯದ ಬಳಿ ತಿರುಗಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅಂದಿನಿಂದ ಚಿರತೆ ಕಾಣಿಸಿಕೊಂಡಿರಲಿಲ್ಲ. ಆದರೆ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಅರಣ್ಯ ಇಲಾಖೆ ಸಿಬ್ಬಂದಿ ಭಾನುವಾರದಿಂದ ಚಿರತೆಯನ್ನು ಸೆರೆ ಹಿಡಿಯಲು ಆಯಕಟ್ಟಿನ ಸ್ಥಳಗಳಲ್ಲಿ ನಾಲ್ಕು ಬೋನುಗಳನ್ನು ಇಡಲಾಗಿತ್ತು. ಅಲ್ಲದೆ ಚಿರಿತೆ ಸೆರೆಗೆ ಐದು ತಂಡಗಳನ್ನು ನಿಯೋಜಿಸಲಾಗಿತ್ತು.
ಇಂದು ಬೆಳಗ್ಗೆ ಆನೇಕಲ್ ತಾಲೂಕಿನ ಬೊಮ್ಮನಹಳ್ಳಿಯ ಕೂಡ್ಲು ಗೇಟ್ ಬಳಿ ಕೃಷ್ಣಾ ರೆಡ್ಡಿ ಬಡಾವಣೆಯ ನಿರ್ಮಾಣ ಹಂತದ ಕಟ್ಟಡದಲ್ಲಿ ಚಿರತೆ ಇರುವ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ನಡೆಸಿದರು.
ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಗೆ ಅರವಳಿಕೆ ಚುಚ್ಚುಮದ್ದು ನೀಡಿದ್ದಾರೆ. ಆದರೆ ಚುಚ್ಚುಮುದ್ದಿಗೂ ಬಗ್ಗದ ಚಿರತೆ ಕಟ್ಟಡದ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಜಿಗಿದು ವೈದ್ಯ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿ ಮಾಡಿ ಪರಾರಿಯಾಗಿತ್ತು.
ಇಂದು ಮಧ್ಯಾಹ್ನ ಬೊಮ್ಮನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಅರಣ್ಯ ಇಲಾಖೆ ಹಾಕಿದ್ದ ಬಲೆಗೆ ಚಿರತೆ ಬಿದ್ದಿದೆ. ಚಿರತೆಯನ್ನು ಸೆರೆ ಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ, ಅದನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸ್ಥಳಾಂತರಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


