ವೈದ್ಯಕೀಯ ಸೀಟು ಕೊಡಿಸುವುದಾಗಿ 18 ಮಂದಿಗೆ 62 ಲಕ್ಷ ರೂ. ವಂಚನೆ; ಎಂಬಿಎ ಪದವೀಧರನ ಬಂಧನ
18 ವೈದ್ಯಕೀಯ ಸೀಟು ಆಕಾಂಕ್ಷಿಗಳಿಗೆ 62 ಲಕ್ಷ ರೂಪಾಯಿ ವಂಚನೆ ಮಾಡಿದ್ದ ಎಂಬಿಎ ಪದವೀಧರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಹೈದರಾಬಾದ್ ಮೂಲದ ಶರತ್ ಗೌಡ ಎಂದು ಗುರುತಿಸಲಾಗಿದ್ದು, ನ್ಯೂ ಬಿಇಎಲ್ ರಸ್ತೆಯಲ್ಲಿರುವ ಕಚೇರಿಯಲ್ಲಿ ಆತ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ.

ಬೆಂಗಳೂರು: 18 ವೈದ್ಯಕೀಯ ಸೀಟು ಆಕಾಂಕ್ಷಿಗಳಿಗೆ 62 ಲಕ್ಷ ರೂಪಾಯಿ ವಂಚನೆ ಮಾಡಿದ್ದ ಎಂಬಿಎ ಪದವೀಧರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ಹೈದರಾಬಾದ್ ಮೂಲದ ಶರತ್ ಗೌಡ ಎಂದು ಗುರುತಿಸಲಾಗಿದ್ದು, ನ್ಯೂ ಬಿಇಎಲ್ ರಸ್ತೆಯಲ್ಲಿರುವ ಕಚೇರಿಯಲ್ಲಿ ಆತ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ.
ಸಂತ್ರಸ್ತರಿಗೆ ವಂಚಿಸಿ ಪರಾರಿಯಾಗಿದ್ದ ಶರತ್ ಗೌಡನನ್ನು ಸಂಜಯನಗರ ಪೊಲೀಸರು ಹೈದರಾಬಾದ್‌ನಲ್ಲಿ ಬಂಧಿಸಿ ಕರೆತಂದಿದ್ದಾರೆ. ಆರೋಪಿ ಯಲಹಂಕದ ಖಾಸಗಿ ಕಾಲೇಜಿನಲ್ಲಿ ಎಂಬಿಎ ವ್ಯಾಸಂಗ ಮಾಡಿದ್ದಾನೆ.

ಕೇರಳದ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಕೊಡಿಸುವುದಾಗಿ ಆತ 12 ಲಕ್ಷ ರೂಪಾಯಿ ತೆಗೆದುಕೊಂಡಿರುವುದಾಗಿ ಸಂತ್ರಸ್ತರೊಬ್ಬರು ಪೊಲೀಸರಿಗೆ ದೂರು ನೀಡಿದ ನಂತರ ಘಟನೆ ಬೆಳಕಿಗೆ ಬಂದಿದೆ. ಬಳಿಕ ಕಚೇರಿ ಬಂದ್ ಮಾಡಿ ಆತ ಪರಾರಿಯಾಗಿದ್ದನು. ಸದ್ಯ ಆರೋಪಿಯಿಂದ ಪೊಲೀಸರು 47.8 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


