ಬೆಂಗಳೂರು: ಸ್ಕೂಟರ್ ಡಿಕ್ಕಿ ಹೊಡೆದು 74 ವರ್ಷದ ವ್ಯಕ್ತಿ ಸಾವು
ಬೆಂಗಳೂರಿನ ರಾಜಾಜಿನಗರದ ಭಾಷ್ಯಂ ಸರ್ಕಲ್‌ನಲ್ಲಿ ಔಷಧಿ ಖರೀದಿಸಿ ಮನೆಗೆ ಮರಳುತ್ತಿದ್ದ 74 ವರ್ಷದ ವ್ಯಕ್ತಿಯೊಬ್ಬರಿಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ.

ಬೆಂಗಳೂರು: ಬೆಂಗಳೂರಿನ ರಾಜಾಜಿನಗರದ ಭಾಷ್ಯಂ ಸರ್ಕಲ್‌ನಲ್ಲಿ ಔಷಧಿ ಖರೀದಿಸಿ ಮನೆಗೆ ಮರಳುತ್ತಿದ್ದ 74 ವರ್ಷದ ವ್ಯಕ್ತಿಯೊಬ್ಬರಿಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ.
ಮಂಗಳವಾರ ರಾತ್ರಿ 9.50ರ ಸುಮಾರಿಗೆ ರಾಜಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ರಾಮಮಂದಿರ ಆಟದ ಮೈದಾನದ ಬಳಿ ಈ ಘಟನೆ ನಡೆದಿದೆ.
ಟೈಲರ್ ಆಗಿ ಕೆಲಸ ಮಾಡುತ್ತಿದ್ದ ಮೃತ ಕಮಲ್ ರಾವ್ ಅವರು ಔಷಧಿ ಖರೀದಿಸಲು ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ವಾಪಸ್ ಮನೆಗೆ ಹೋಗುತ್ತಿದ್ದ ವೇಳೆ ಸ್ಕೂಟರ್ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದಿದ್ದಾರೆ. ರಾವ್ ಅವರಿಗೆ ಗಂಭೀರ ಗಾಯಗಳಾಗಿದ್ದು, ದಾರಿಹೋಕರು ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾರೆ. ನಂತರ ಅವರನ್ನು ನಿಮ್ಹಾನ್ಸ್‌ಗೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.
ರಾಜಾಜಿನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಾಹನವನ್ನು ವಶಪಡಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


