ಬೆಂಗಳೂರಿನಲ್ಲಿ ಮಳೆ: ಈ ಪ್ರದೇಶಗಳ ವಾಹನ ಚಾಲಕರಿಗೆ ಪೊಲೀಸರಿಂದ ಮಹತ್ವದ ಸಂಚಾರ ಸಲಹೆ...
ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ ಸುರಿದಿದ್ದು. ರಸ್ತೆಗಳು ಜಲಾವೃತಗೊಂಡಿರುವುದರಿಂದ ವಾಹನ ಸಂಚಾರರು ಪರದಾಡುವಂತಾಗಿದೆ.

ಬೆಂಗಳೂರು: ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ ಸುರಿದಿದ್ದು. ರಸ್ತೆಗಳು ಜಲಾವೃತಗೊಂಡಿರುವುದರಿಂದ ವಾಹನ ಸಂಚಾರರು ಪರದಾಡುವಂತಾಗಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸಂಚಾರ ಪೊಲೀಸರು ಸುಗಮ ವಾಹನ ಸಂಚಾರಕ್ಕೆ ಅಡ್ಡಿಯಾಗಿರುವ ಪ್ರದೇಶಗಳ ಬಗ್ಗೆ ಮಾಹಿತಿ ನೀಡಿದ್ದು, ಆ ಮಾರ್ಗಗಳಲ್ಲಿ ಸಂಚರಿಸುವ ವಾಹನ ಸವಾರರಿಗೆ ಮಾರ್ಗ ಬದಲಾವಣೆಗೆ ಸಲಹೆ ನೀಡಿದ್ದಾರೆ.
ಕೆ. ಆರ್ ಪುರ ಸಂಚಾರ ಠಾಣಾ ಸರಹದ್ದಿನಲ್ಲಿ ಮಳೆಯಾಗಿದ್ದು, ಕಸ್ತೂರಿ ನಗರ ರಿಂಗ್ ರಸ್ತೆಯ ಟಿನ್ ಫ್ಯಾಕ್ಟರಿ ಕಡೆಯಿಂದ ಆರ್.ಎಂ ನಗರ ಸಿಗ್ನಲ್ ಜಂಕ್ಷನ್ ( ಹೆಬ್ಬಾಳ) ಕಡೆ ವಾಹನಗಳ ಸಂಚಾರ ನಿಧಾನಗತಿಯಲ್ಲಿರುತ್ತದೆ ಎಂದು ಸಂಚಾರ ಪೊಲೀಸ್ ಟ್ವೀಟ್ ಖಾತೆ ಮಾಹಿತಿ ನೀಡಿದೆ.
ಇನ್ನು ಬಾಣಸವಾಡಿ ಮುಖ್ಯರಸ್ತೆಯಲ್ಲಿ (ಜೈ ಭಾರತ್ ನಗರ ಪೆಟ್ರೋಲ್ ಬಂಕ್ ಬಳಿ) ರಸ್ತೆ ಜಲಾವೃತಗೊಂಡಿದ್ದು, ನಿಧಾನಗತಿಯ ಸಂಚಾರವಿದೆ.
ಎಂ.ಎಂ.ಟಿ ಜಂಕ್ಷನ್ ಹತ್ತಿರ ಹ್ಯಾಂಗಿಂಗ್ ಬ್ರಿಡ್ಜ್ ಮೇಲೆ KSRTC ಬಸ್ ಕೆಟ್ಟು ನಿಂತಿದ್ದು ಕೆ.ಆರ್ ಪುರ ಕಡೆ ಸಂಚಾರ ನಿಧಾನಗತಿಯಲ್ಲಿರುತ್ತದೆ. ಇದನ್ನು ಶೀಘ್ರದಲ್ಲೇ ತೆರವುಗೊಳಿಸಲಾಗುವುದು ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.
ಇನ್ನು ವಿದ್ಯಾ ಶಿಲ್ಪ ಕೆಳಸೇತುವೆ ಸರ್ವೀಸ್ ರಸ್ತೆ ಜಲಾವೃತಗೊಂಡಿದ್ದ ಕಾರಣ ನಿಧಾನಗತಿಯ ವಾಹನಸಂಚಾರವಿದೆ. ಈ ಹಿನ್ನೆಲೆಯಲ್ಲಿ ಸಂಚಾರ ಮಾರ್ಗವನ್ನು ಕೊಗಿಲು ಜಂಕ್ಷನ್ ಕಡೆಗೆ ತಿರುಗಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


