ರಾಜ್ಯ

ಕೆಪಿಎಸ್'ಸಿ ಪರೀಕ್ಷೆಗೆ ಬಂದ ಸ್ತ್ರೀಯರ ತಾಳಿ, ಕಾಲುಂಗುರ ತೆಗೆಸಿದ ಸಿಬ್ಬಂದಿ: ಅಭ್ಯರ್ಥಿಗಳ ಆಕ್ರೋಶ, ತನಿಖೆ ನಡೆಸುತ್ತೇವೆಂದ ಸಿಎಂ

ಕಲಬುರಗಿಯಲ್ಲಿ ಭಾನುವಾರ ನಡೆದ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್'ಸಿ) ಗ್ರೂಪ್ ಸಿ ಹುದ್ದೆಗಳ ನೇಮಕಾತಿ ಪರೀಕ್ಷೆ ವೇಳೆ ಪರೀಕ್ಷಾ ಕೇಂದ್ರವೊಂದರ ಸಿಬ್ಬಂದ ಮಹಿಳಾ ಅಭ್ಯರ್ಥಿಗಳ ಕೊರಳಲ್ಲಿನ ತಾಳಿ ಹಾಗೂ ಕಾಲುಂಗುರ ತೆಗೆಸಿದ್ದು, ಇದಕ್ಕೆ ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಪಿಎಸ್'ಸಿ ಪರೀಕ್ಷೆಗೆ ಬಂದ ಸ್ತ್ರೀಯರ ತಾಳಿ, ಕಾಲುಂಗುರ ತೆಗೆಸಿದ ಸಿಬ್ಬಂದಿ: ಅಭ್ಯರ್ಥಿಗಳ ಆಕ್ರೋಶ, ತನಿಖೆ ನಡೆಸುತ್ತೇವೆಂದ ಸಿಎಂ
ಪರೀಕ್ಷೆಗೆ ಹಾಜರಾಗಲು ಮಂಗಳಸೂತ್ರ ತೆಗೆದು ಕೊಡುತ್ತಿರುವ ಅಭ್ಯರ್ಥಿ.
Published On :

ಕಲಬುರಗಿ: ಕಲಬುರಗಿಯಲ್ಲಿ ಭಾನುವಾರ ನಡೆದ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್'ಸಿ) ಗ್ರೂಪ್ ಸಿ ಹುದ್ದೆಗಳ ನೇಮಕಾತಿ ಪರೀಕ್ಷೆ ವೇಳೆ ಪರೀಕ್ಷಾ ಕೇಂದ್ರವೊಂದರ ಸಿಬ್ಬಂದ ಮಹಿಳಾ ಅಭ್ಯರ್ಥಿಗಳ ಕೊರಳಲ್ಲಿನ ತಾಳಿ ಹಾಗೂ ಕಾಲುಂಗುರ ತೆಗೆಸಿದ್ದು, ಇದಕ್ಕೆ ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾನುವಾರ ಕನ್ನಡ ಭಾಷಾ ವಿಷಯದ ಲಿಖಿತ ಪರೀಕ್ಷೆ ಇತ್ತು, ಪರೀಕ್ಷಾ ಅಕ್ರಮ ತಡೆಯಲು ಪರೀಕ್ಷೆಯನ್ನು ಪಾರದರ್ಶಕ, ನ್ಯಾಯಸಮ್ಮತ ಹಾಗೂ ನಿಷ್ಪಕ್ಷಪಾತವಾಗಿ ನಡೆಸಲು ಹೆಚ್ಚಿನ ಆದ್ಯತೆ ನೀಡಿದ್ದ ಕರ್ನಾಟಕ ಲೋಕಸೇವಾ ಆಯೋಗ, ಪರೀಕ್ಷಾ ಕೇಂದ್ರಗಳಿಗೆ ಏನೆಲ್ಲಾ ಕೊಂಡೊಯ್ಯಬಹುದು, ಏನನ್ನು ಕೊಂಡೊಯ್ಯಬಾರದು ಎಂಬ ಬಗ್ಗೆ ಪಟ್ಟಿಯನ್ನೇ ಪ್ರಕಟಿಸಿತ್ತು. ಯಾವುದೇ ತರಹದ ಆಭರಣಗಳನ್ನು ಧರಿಸಿಕೊಂಡು ಅಭ್ಯರ್ಥಿಗಳು ಪರೀಕ್ಷಾ ಕೇಂದ್ರ ಪ್ರವೇಶಿಸುವಂತಿಲ್ಲ ಎಂದು ಹೇಳಿತ್ತು.

ಆದರೆ, ಮಹಿಳೆಯ ಮುತ್ತೈದೆತನದ ಸಂಕೇತವಾಗಿರುವ ಮಂಗಳಸೂತ್ರ ಹಾಗೂ ಕಾಲುಂಗುರಗಳನ್ನು ಧರಿಸಲು ಅವಕಾಶ ನೀಡಿತ್ತು. ಆದರೆ, ನಗರದ ಪೊಲೀಸ್ ಕಮಿಷನರ್ ಕಚೇರಿ ಪಕ್ಕದಲ್ಲೇ ಇರುವ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿದ್ದ ಭದ್ರತಾ ಸಿಬ್ಬಂದಿ, ವಿವಾಹಿತ ಮಹಿಳೆಯರು ಮಂಗಳಸೂತ್ರ ಹಾಗೂ ಕಾಲುಂಗುರ ಧರಿಸಿಕೊಂಡು ಪರೀಕ್ಷಾ ಕೇಂದ್ರ ಪ್ರವೇಶಿಸಲು ಅವಕಾಶ ನೀಡಿಲ್ಲ. ಹೀಗಾಗಿ ಅಭ್ಯರ್ಥಿಗಳು ಅನಿವಾರ್ಯವಾಗಿ ತಾಳಿ ಹಾಗೂ ಕಾಲುಂಗುರ ತೆಗೆದಿಟ್ಟೇ ಪರೀಕ್ಷೆ ಬರೆದಿದ್ದಾರೆ. ಸಿಬ್ಬಂದಿಗಳ ಈ ವರ್ತನೆಗೆ ಅಭ್ಯರ್ಥಿಗಳು ಆಕ್ರೋಶ ಹೊರಹಾಗಿದ್ದಾರೆ.

ಈ ಬೆಳವಣಿಗೆ ಕುರಿತು ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಬಗ್ಗೆ ಸಂಪೂರ್ಣ ತನಿಖೆ ಮಾಡಿಸುವುದಾಗಿ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.