ವಂಚನೆ ಪ್ರಕರಣ: ಅಭಿನವ ಹಾಲಶ್ರೀಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು
ಉದ್ಯಮಿಗೆ ಬಹುಕೋಟಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿನವ ಹಾಲಶ್ರೀಗೆ ಕರ್ನಾಟಕ ಹೈಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.

ಬೆಂಗಳೂರು: ಉದ್ಯಮಿಗೆ ಬಹುಕೋಟಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿನವ ಹಾಲಶ್ರೀಗೆ ಕರ್ನಾಟಕ ಹೈಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.
ಚೈತ್ರಾ ಆ್ಯಂಡ್ ಗ್ಯಾಂಗ್ನಿಂದ 5 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿನವ ಹಾಲಶ್ರೀಗೆ ಹೈಕೋರ್ಟ್‌ನ ಏಕಸದಸ್ಯ ಪೀಠದಿಂದ ಜಾಮೀನು ಮಂಜೂರು ಮಾಡಲಾಗಿದ್ದು, ಪ್ರಕರಣದಲ್ಲಿ ಅಭಿನವ ಹಾಲಶ್ರೀ ಮೂರನೇ ಆರೋಪಿಯಾಗಿದ್ದರು.
ವಂಚನೆ ಪ್ರಕರಣದಲ್ಲಿ ತನ್ನ ಹೆಸರು ಕೇಳಿಬರುತ್ತಿದ್ದಂತೆಯೇ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಹಾಲಶ್ರೀ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅಕ್ಟೋಬರ್ 16 ರಂದು ಚೈತ್ರಾ ಮತ್ತು ತಂಡದಿಂದ ಉದ್ಯಮಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದ ಮೂರನೇ ಆರೋಪಿಯಾದ ಅಭಿನವ ಹಾಲಶ್ರೀ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಸಿಸಿಹೆಚ್ 57ನೇ ನ್ಯಾಯಾಲಯ ವಜಾಗೊಳಿಸಿತ್ತು.
ಸಿಸಿಬಿ ಆಕ್ಷೇಪಣೆ
ಹಾಲಾಶ್ರೀಗೆ ಜಾಮೀನು ನೀಡದಂತೆ ಈ ಹಿಂದೆ ಸಿಸಿಬಿ ಆಕ್ಷೇಪಣೆ ಸಲ್ಲಿಸಿತ್ತು. ಬಳಿಕ ಹಾಲಶ್ರೀ ಪರ ವಕೀಲರು, ವಂಚನೆ ಪ್ರಕರಣದಲ್ಲಿ ಹಾಲಶ್ರೀ ವಿರುದ್ಧ ಯಾವುದೇ ಆರೋಪವಿಲ್ಲ, ಚೈತ್ರಾ ವಿರುದ್ಧ ಮಾತ್ರ ವಂಚನೆ ಆರೋಪವಿದೆ. ಹೀಗಾಗಿ ಅಭಿನವ ಹಾಲಶ್ರೀಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಮನವಿ ಮಾಡಿದ್ದರು. ಈ ಕುರಿತು ಸುದಿರ್ಘ ವಿಚಾರಣೆ ನಡೆಸಿದ್ದ ಕೋರ್ಟ್, ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸಿಸಿಬಿಗೆ ಸೂಚಿಸಿತ್ತು. ಈ ನಡುವೆ ಹಾಲಶ್ರೀಗೆ ನಿರೀಕ್ಷಣಾ ಜಾಮೀನು ನೀಡದಂತೆ ವಂಚನೆಗೆ ಒಳಗಾದ ಉದ್ಯಮಿ ಗೋವಿಂದಬಾಬು ಪೂಜಾರಿ ಕೋರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


