ರಾಜ್ಯ

ಬೆಂಗಳೂರು ನಗರ ಜಿಲ್ಲೆಯಲ್ಲಿ ಅಕ್ರಮ ಬೋರ್‌ವೆಲ್‌ ಗಳ ತಡೆಗೆ ವಿಶೇಷ ತಂಡ ರಚನೆ: ಸಚಿವ ಎನ್‌ಎಸ್‌ ಬೋಸರಾಜು 

ಬೆಂಗಳೂರು ನಗರ ಜಿಲ್ಲೆಯಲ್ಲಿ ಅಕ್ರಮವಾಗಿ ಬೋರ್‌ವೆಲ್‌ ಕೊರೆಯುವುದನ್ನು ತಡೆಯಲು ಹಿರಿಯ ಅಧಿಕಾರಿಗಳನ್ನೊಳಗೊಂಡ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಕರ್ನಾಟಕ ಸಣ್ಣ ನೀರಾವರಿ ಸಚಿವ ಎನ್‌ಎಸ್‌ ಬೋಸರಾಜು ಗುರುವಾರ ಹೇಳಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಅಕ್ರಮ ಬೋರ್‌ವೆಲ್‌ ಗಳ ತಡೆಗೆ ವಿಶೇಷ ತಂಡ ರಚನೆ: ಸಚಿವ ಎನ್‌ಎಸ್‌ ಬೋಸರಾಜು 
ಸಚಿವ ಎನ್.ಎಸ್. ಬೋಸ
Published On :

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಲ್ಲಿ ಅಕ್ರಮವಾಗಿ ಬೋರ್‌ವೆಲ್‌ ಕೊರೆಯುವುದನ್ನು ತಡೆಯಲು ಹಿರಿಯ ಅಧಿಕಾರಿಗಳನ್ನೊಳಗೊಂಡ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಕರ್ನಾಟಕ ಸಣ್ಣ ನೀರಾವರಿ ಸಚಿವ ಎನ್‌ಎಸ್‌ ಬೋಸರಾಜು ಗುರುವಾರ ಹೇಳಿದ್ದಾರೆ.

ಅಂತರ್ಜಲ ಕುಸಿತ ತಡೆಯಲು ಈ ಕ್ರಮ ಅಗತ್ಯವಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಬೋರ್‌ವೆಲ್‌ ಕೊರೆಯಲು  ಅನುಮತಿ ಸಿಗುವುದು ವಿಳಂಬವಾಗುತ್ತಿದೆ ಎಂಬುದು ನಿಜ. ಆದರೆ, ಅಕ್ರಮವಾಗಿ ಬೋರೆವೆಲ್ ಕೊರೆಯುವ ಬಗ್ಗೆ ದೂರುಗಳು ಬಂದಿರುವುದರಿಂದ ಇದನ್ನು ನಿಲ್ಲಿಸಬೇಕು. ಈ ಬಗ್ಗೆ ಪರಿಶೀಲಿಸುವಂತೆ ಅಂತರ್ಜಲ ನಿರ್ದೇಶನಾಲಯಕ್ಕೆ ಸೂಚಿಸಿರುವುದಾಗಿ ಅವರು ತಿಳಿಸಿದ್ದಾರೆ. 

ಹಠಾತ್ ದಾಳಿಯಲ್ಲಿ ಬೋರ್‌ವೆಲ್‌ಗಳ ತಪಾಸಣೆ ನಡೆಸಲು ವಿಶೇಷ ತಂಡಕ್ಕೆ ತಿಳಿಸಲಾಗಿದೆ. ತಪಾಸಣೆ ನಡೆಸಲು ಅಧಿಕಾರಿಗಳಿಗೆ ಸೂಚಿಸಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಮುಖ್ಯ ಇಂಜಿನಿಯರ್ ಗೆ ಅವರು ಸೂಚಿಸಿದ್ದಾರೆ. ಸಚಿವರ ನಿರ್ದೇಶನದಂತೆ ಅಂತರ್ಜಲ ನಿರ್ದೇಶನಾಲಯದ ಉಪನಿರ್ದೇಶಕ ಜಿ.ಜಯಣ್ಣ ಹಾಗೂ ಹಿರಿಯ ಭೂವಿಜ್ಞಾನಿ ಎಚ್.ಎಂ.ನಾಗರಾಜ್ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.