ಬೆಂಗಳೂರು: ಕುಂಬಾರಪೇಟೆ ಮಕ್ಕಳ ಆಟಿಕೆ ಮಳಿಗೆಯಲ್ಲಿ ಭೀಕರ ಅಗ್ನಿ ಅವಘಡ
ಬೆಂಗಳೂರಿನ ಕುಂಬಾರಪೇಟೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಮಕ್ಕಳ ಆಟಿಕೆ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಬೆಂಗಳೂರು: ಬೆಂಗಳೂರಿನ ಕುಂಬಾರಪೇಟೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಮಕ್ಕಳ ಆಟಿಕೆ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಕೆಆರ್ ಮಾರುಕಟ್ಟೆ ಸಮೀಪದಲ್ಲಿರುವ ಕುಂಬಾರಪೇಟೆಯಲ್ಲಿರುವ ಮಕ್ಕಳ ಆಟದ ಸಾಮಾನು, ಎಲೆಕ್ಟ್ರಾನಿಕ್ಸ್ ವಸ್ತು ಮಾರಾಟದ ಮಳಿಗೆಯ ಮೂರನೇ ಮಹಡಿಯಲ್ಲಿ ಭಾರೀ ಅಗ್ನಿ ಅವಘಡ (Fire Accident) ಸಂಭವಿಸಿದೆ. ನೋಡ ನೋಡುತ್ತಲೇ ಬೆಂಕಿಯ ಕೆನ್ನಾಲಿಗೆ 6ನೇ ಮಹಡಿವರೆಗೂ ಹಬ್ಬಿದೆ. ಅಗ್ನಿ ಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವಾಗ ತಡವಾಗಿದ್ದರಿಂದ ಬೆಂಕಿಯು ಆರನೇ ಮಹಡಿಗೂ ಹಬ್ಬಿದೆ. ಸದ್ಯ, ನೀರು ಖಾಲಿಯಾಗಿದ್ದರಿಂದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಡಪಡುತ್ತಿದ್ದಾರೆ.
ಪ್ಲಾಸ್ಟಿಕ್ ಗೋದಾಮಿನ 3, 4ನೇ ಮಹಡಿಯಲ್ಲಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿತ್ತು. ಕೂಡಲೇ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿ ಒಂದು ಗಂಟೆಯಾದರೂ ಸ್ಥಳಕ್ಕೆ ಆಗಮಿಸಲಿಲ್ಲ. ಇದರಿಂದಾಗಿ ಬೆಂಕಿ ಮತ್ತಷ್ಟು ಹೆಚ್ಚಾಯಿತು. ತಡವಾಗಿ ಐದು ವಾಹನಗಳಲ್ಲಿ ಬಂದ 30 ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ. ಆದರೆ, ಬೆಂಕಿ ಧಗಧಗಿಸಿದ ಪರಿಣಾಮ ಮೂರನೇ ಮಹಡಿಯಿಂದ ಆರನೇ ಮಹಡಿಗೆ ಬೆಂಕಿ ಹಬ್ಬಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯದ ಸಂಭವಿಸಿಲ್ಲ ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


