ವಿವಾಹಕ್ಕೆ ಸಂತ್ರಸ್ತೆ, ರೇಪ್ ಆರೋಪಿ ಒಪ್ಪಿಗೆ ಹಿನ್ನೆಲೆ; ಪೋಕ್ಸೋ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್!
ಅತ್ಯಾಚಾರದ ಸಂತ್ರಸ್ತೆ ಹಾಗೂ ಆರೋಪಿ ಇಬ್ಬರೂ ಪರಸ್ಪರ ವಿವಾಹವಾಗಲು ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

ಬೆಂಗಳೂರು: ಅತ್ಯಾಚಾರದ ಸಂತ್ರಸ್ತೆ ಹಾಗೂ ಆರೋಪಿ ಇಬ್ಬರೂ ಪರಸ್ಪರ ವಿವಾಹವಾಗಲು ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ಅತ್ಯಾಚಾರದ ಸಂತ್ರಸ್ತೆ ಈಗ ವಯಸ್ಕಳಾಗಿದ್ದು ಆರೋಪಿಯಿಂದಿಗೆ ವಿವಾಹವಾಗಲು ಒಪ್ಪಿಗೆ ನೀಡಿದ್ದಾರೆ. ಆದ್ದರಿಂದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಆದರೆ ಕೋರ್ಟ್ ಇಬ್ಬರ ವಿವಾಹಕ್ಕೂ ಒಂದು ತಿಂಗಳ ಗಡುವನ್ನು ಕೋರ್ಟ್ ವಿಧಿಸಿದ್ದು ಆರೋಪಿಯನ್ನು ನ್ಯಾಯಾಂಗ ಬಂಧನದಿಂದ ಮುಕ್ತಗೊಳಿಸಲು ಸೂಚನೆ ನೀಡಿದೆ.
ಸಂತ್ರಸ್ತೆ ಮತ್ತು ಆಕೆಯ ತಂದೆ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಎದುರು ಹಾಜರಾಗಿ ಪ್ರಮಾಣಪತ್ರ ಸಲ್ಲಿಸಿದ್ದು, ವಿಚಾರಣೆಯನ್ನು ರದ್ದುಪಡಿಸಲು ತಮ್ಮ ಅಭ್ಯಂತರವಿಲ್ಲ ಎಂದು ತಿಳಿಸಿದ್ದಾರೆ. ವಿಚಾರಣೆಯಲ್ಲಿ ಸಂತ್ರಸ್ತೆ ತನ್ನ ಪಾಟಿಸವಾಲಿನಲ್ಲಿ ಪ್ರತಿಕೂಲವಾಗಿ ವರ್ತಿಸಿದ್ದಾಳೆ ಮತ್ತು ಪ್ರಾಸಿಕ್ಯೂಷನ್ ಪ್ರಕರಣವನ್ನು ಬೆಂಬಲಿಸಲು ಪ್ರಾಸಿಕ್ಯೂಟರ್ನಿಂದ ಸಂತ್ರಸ್ತೆಯಿಂದ ಯಾವ ಸಾಕ್ಷ್ಯಾಧಾರಗಳನ್ನೂ ಪಡೆಯಲಾಗಿಲ್ಲ ಎಂದು ಹೈಕೋರ್ಟ್ ಹೇಳಿದೆ.
ಈ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮುಂದುವರೆಸುವುದು ನ್ಯಾಯಾಂಗದ ಪ್ರಕ್ರಿಯೆಗೆ ಸೂಕ್ತವಲ್ಲ ಎಂದು ಕೋರ್ಟ್ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


