ರಾಜ್ಯ

ಸಿಎಂ-ಡಿಸಿಎಂ ನಡುವೆ ಜಾತಿ ಗಣತಿ ವಾರ್; ವರದಿ ಜಾರಿ ವಿಚಾರದಲ್ಲಿ ನನ್ನ ನಿರ್ಧಾರ ಅಚಲ: ಸಿದ್ದರಾಮಯ್ಯ

ರಾಜ್ಯ ಸರ್ಕಾರದ ಮಹತ್ವದ ಜಾತಿ ಗಣತಿ ವರದಿಗೆ ಸ್ವತಃ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ ವಿರೋಧ ವ್ಯಕ್ತಪಡಿಸಿದ್ದು, ಮತ್ತೊಂದು ಕಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಗಣತಿ ವರದಿ ಸ್ವೀಕರಿಸಿ, ಅವಕಾಶ ವಂಚಿತ...

ಸಿಎಂ-ಡಿಸಿಎಂ ನಡುವೆ ಜಾತಿ ಗಣತಿ ವಾರ್; ವರದಿ ಜಾರಿ ವಿಚಾರದಲ್ಲಿ ನನ್ನ ನಿರ್ಧಾರ ಅಚಲ: ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿಕೆ ಶಿವಕುಮಾರ್
Published On :

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವದ ಜಾತಿ ಗಣತಿ ವರದಿಗೆ ಸ್ವತಃ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ ವಿರೋಧ ವ್ಯಕ್ತಪಡಿಸಿದ್ದು, ಮತ್ತೊಂದು ಕಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಗಣತಿ ವರದಿ ಸ್ವೀಕರಿಸಿ, ಅವಕಾಶ ವಂಚಿತ ಸಮುದಾಯಗಳಿಗೆ ನ್ಯಾಯ ಕೊಡಿಸುವ ನನ್ನ ನಿರ್ಧಾರ ಅಚಲ ಎಂದು ಹೇಳಿದ್ದಾರೆ. 

ಈ ಮೂಲಕ ಜಾತಿ ಗಣತಿ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನಡುವೆ ನೇರ ಸಂಘರ್ಷಕ್ಕೆ ಕಾರಣವಾಗಿದೆ.

ಕಾಂತರಾಜ್ ಆಯೋಗದ ವರದಿ ತಿರಸ್ಕರಿಸಲು ಒಕ್ಕಲಿಗರ ಸಂಘ ಸಲ್ಲಿಸಿದ ಮನವಿ ಪತ್ರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಹಿ ಹಾಕಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ ಮತ್ತು ರಾಹುಲ್‌ ಗಾಂಧಿ ಅವರ ನಿಲುವಿಗೆ ನನ್ನ ಸಂಪೂರ್ಣ ಸಹಮತ ಇದೆ ಎಂದು ಹೇಳುವ ಮೂಲಕ ಡಿಕೆಶಿಯನ್ನು ಇಕ್ಕಟ್ಟಿಗೆ ಸಿಲುಕಿಸುವ ದಾಳ ಉರುಳಿಸಿದ್ದಾರೆ.

ನಮ್ಮ ಹೆಮ್ಮೆಯ ನಾಯಕರಾದ ರಾಹುಲ್ ಗಾಂಧಿಯವರ ನಿಲುವಿಗೆ ನನ್ನ ಪೂರ್ಣ ಸಹಮತವಿದೆ. ದೇಶಾದ್ಯಂತ ಜಾತಿಗಣತಿ ನಡೆದು, ಅದರ ವರದಿಯ ಆಧಾರದ ಮೇಲೆ "ಸರ್ವರಿಗೂ ಸಮಪಾಲು - ಸರ್ವರಿಗೂ ಸಮಬಾಳು" ದಕ್ಕಿದಾಗಲೇ ದೇಶಕ್ಕೆ ದೊರೆತ ಸ್ವಾತಂತ್ರ್ಯ ಸಾರ್ಥಕವಾಗಲಿದೆ ಎಂಬುದು ನನ್ನ ಭಾವನೆ.

ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನಡೆಸಿದ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸ್ವೀಕರಿಸಿ, ಅವಕಾಶಗಳಿಂದ ವಂಚಿತವಾದ ಸಮುದಾಯಗಳಿಗೆ ನ್ಯಾಯ ಕೊಡಿಸುವ ನನ್ನ ನಿರ್ಧಾರ ಅಚಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.