ರಾಜ್ಯ

ತಮಿಳುನಾಡಿಗೆ ಮತ್ತೆ ಒಂದು ತಿಂಗಳು ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ CWRC ನಿರ್ದೇಶನ

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲೇ ರಾಜ್ಯಕ್ಕೆ ಮತ್ತೆ ಹಿನ್ನಡೆಯಾಗಿದ್ದು, ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWRC) ಕರ್ನಾಟಕಕ್ಕೆ ನಿರ್ದೇಶನ ನೀಡಿದೆ.

ತಮಿಳುನಾಡಿಗೆ ಮತ್ತೆ ಒಂದು ತಿಂಗಳು ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ CWRC ನಿರ್ದೇಶನ
ಕೆಆರ್ ಎಸ್
Published On :

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲೇ ರಾಜ್ಯಕ್ಕೆ ಮತ್ತೆ ಹಿನ್ನಡೆಯಾಗಿದ್ದು, ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWRC) ಕರ್ನಾಟಕಕ್ಕೆ ನಿರ್ದೇಶನ ನೀಡಿದೆ.

ಇಂದು ಸಭೆ ನಡೆಸಿದ CWRC, ನ್ಯಾಯಾಧಿಕರಣ ಹಾಗೂ ಸುಪ್ರೀಂಕೋರ್ಟ್ ಅಂತಿಮ ತೀರ್ಪು ಪಾಲಿಸುವಂತೆ ಹೇಳಿ ನವೆಂಬರ್ 23ರಿಂದ ಡಿಸೆಂಬರ್ 23ರವರಗೆ ಪ್ರತಿನಿತ್ಯ 2700 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದೆ.

ಡಿಸೆಂಬರ್​ ಅವಧಿಯಲ್ಲಿ ಹರಿಸಬೇಕಿರುವ 6 ಟಿಎಂಸಿ ನೀರು ಹಾಗೂ ಬಾಕಿ ಉಳಿಸಿಕೊಂಡಿರುವ 11 ಟಿಎಂಸಿ ನೀರು ಸೇರಿದಂತೆ ಒಟ್ಟು 17 ಟಿಎಂಸಿ ನೀರು ಹರಿಸುವಂತೆ ಸಭೆಯಲ್ಲಿ ತಮಿಳುನಾಡು ಬೇಡಿಕೆ ಇಟ್ಟಿದೆ.

ತಮಿಳುನಾಡು ಬೇಡಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಕರ್ನಾಟಕದ ಅಧಿಕಾರಿಗಳು, ರಾಜ್ಯದಲ್ಲಿ ಈಗ ಬರ ಪರಿಸ್ಥಿತಿ ಇದೆ. ತಮಿಳುನಾಡು 17ಟಿಎಂಸಿ ನೀರು ಕೇಳುತ್ತಿರುವುದಕ್ಕೆ ಅರ್ಥವೇ ಇಲ್ಲ. ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿಲ್ಲ. ಕುಡಿಯುವುದಕ್ಕೂ ನೀರು ಸಂಗ್ರಹ ಇಲ್ಲ. ಕರ್ನಾಟಕದಲ್ಲಿ ಮುಂದೆ ಮಳೆಯಾಗುವ ಸಾಧ್ಯತೆ ಸಹ ಕಡಿಮೆ. ತಮಿಳುನಾಡು ರಾಜ್ಯದಲ್ಲಿ ಈಗ ಹೆಚ್ಚು ಮಳೆಯಾಗುತ್ತಿದೆ. ಹಿಂಗಾರು ಮಾರುತಗಳು ಪ್ರಬಲವಾಗಿವೆ, ಮಳೆ ಹೆಚ್ಚು ಸುರಿಯುತ್ತಿದೆ. ತಮಿಳುನಾಡಿಗೆ ನೀರು ಬಿಟ್ಟರೆ ವಾಪಸ್ ತೆಗೆದುಕೊಳ್ಳಲು ಸಾಧ್ಯವೆ? ಹೀಗಾಗಿ ನೀರು ಹರಿಸಲು ಸಾಧ್ಯವೇ ಇಲ್ಲ ಎಂದು ವಾದಿಸಿದ್ದಾರೆ.

ಅಂತಿಮವಾಗಿ ತಮಿಳುನಾಡು ಬೇಡಿಕೆ ತಿರಸ್ಕರಿಸಿದ CWRC, ಕರ್ನಾಟಕಕ್ಕೆ ಒಂದು ತಿಂಗಳು ಅಂದರೆ ನವೆಂಬರ್ 23ರಿಂದ ಡಿಸೆಂಬರ್ 23ರ ವರೆಗೆ ಪ್ರತಿನಿತ್ಯ 2700 ಕ್ಯೂಸೆಕ್ ನೀರು ಹರಿಸುವಂತೆ ಸೂಚಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.