ರಾಜ್ಯದಲ್ಲಿ 971 ಅಕ್ರಮ ಭೂ ಮಂಜೂರಾತಿ ರದ್ದುಗೊಳಿಸಿದ ಹಾಸನ ಜಿಲ್ಲಾಡಳಿತ
ಹೇಮಾವತಿ ಪುನರ್ವಸತಿ ಯೋಜನೆಯ ಮೂರು ದಶಕಗಳ ಬಹುಕೋಟಿ ರೂಪಾಯಿ ಭೂ ಹಗರಣ ಕೊನೆಗೂ ತಾರ್ಕಿಕ ಅಂತ್ಯ ಕಾಣುತ್ತಿದೆ. ಯೋಜನೆಯಡಿ ಪುನರ್ವಸತಿ ನೆಪದಲ್ಲಿ ಬೋಗಸ್ ಫಲಾನುಭವಿಗಳಿಗೆ ಹಂಚಲಾಗಿದ್ದ 971 ಅಕ್ರಮ ಭೂ ಮಂಜೂರಾತಿಯನ್ನು ಹಾಸನ ಜಿಲ್ಲಾಡಳಿತ ರದ್ದುಪಡಿಸಿದೆ.

ಹಾಸನ: ಹೇಮಾವತಿ ಪುನರ್ವಸತಿ ಯೋಜನೆಯ ಮೂರು ದಶಕಗಳ ಬಹುಕೋಟಿ ರೂಪಾಯಿ ಭೂ ಹಗರಣ ಕೊನೆಗೂ ತಾರ್ಕಿಕ ಅಂತ್ಯ ಕಾಣುತ್ತಿದೆ. ಯೋಜನೆಯಡಿ ಪುನರ್ವಸತಿ ನೆಪದಲ್ಲಿ ಬೋಗಸ್ ಫಲಾನುಭವಿಗಳಿಗೆ ಹಂಚಲಾಗಿದ್ದ 971 ಅಕ್ರಮ ಭೂ ಮಂಜೂರಾತಿಯನ್ನು ಹಾಸನ ಜಿಲ್ಲಾಡಳಿತ ರದ್ದುಪಡಿಸಿದೆ.
ಅಂದಿನ ಸಹಾಯಕ ಆಯುಕ್ತರಾದ ಕವಿತಾ ರಾಜಾರಾಂ, ಡಾ.ನಾಗರಾಜ್ ಸೇರಿದಂತೆ ಹಿರಿಯ ಅಧಿಕಾರಿಗಳನ್ನೊಳಗೊಂಡ ಸತ್ಯಶೋಧನಾ ಸಮಿತಿಯು ಹಗರಣದ ತನಿಖೆ ನಡೆಸಿ, ಭೂ ಮತ್ತು ದಾಖಲೆಗಳ ನಿರ್ದೇಶಕ ಮೊಹಮ್ಮದ್ ಮೊಹಿಸಿನ್ ಅವರ ನಿರ್ದೇಶನದ ಮೇರೆಗೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡುವ ವರದಿಯನ್ನು ಸಲ್ಲಿಸಿದೆ.
ವರದಿ ಆಧರಿಸಿ ಅಂದಿನ ಜಿಲ್ಲಾಧಿಕಾರಿ ಗಿರೀಶ್ ಅವರು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ವಿವರವಾದ ವರದಿ ಸಲ್ಲಿಸಿದ್ದರು. 2005 ರಿಂದ 2019 ರ ನಡುವೆ ಸೇವೆ ಸಲ್ಲಿಸಿದ ನಾಲ್ವರು ಸಹಾಯಕ ಆಯುಕ್ತರು, 38 ತಹಶೀಲ್ದಾರ್‌ಗಳು, ನಾಲ್ವರು ವಿಶೇಷ ಭೂಸ್ವಾಧೀನ ಅಧಿಕಾರಿಗಳು, 21 ಉಪ ತಹಶೀಲ್ದಾರ್‌ಗಳು, 33 ಕಂದಾಯ ನಿರೀಕ್ಷಕರು ಮತ್ತು 26 ಪ್ರಥಮ ವಿಭಾಗದ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳಲ್ಲಿರುವ 210 ಕಂದಾಯ ನೌಕರರಿಗೆ ಜಿಲ್ಲಾ ಅಪರಾಧ ವಿಭಾಗದ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ.
ಅಧಿಕಾರಿಗಳು ಬೋಗಸ್ ಜಮೀನು ಮಾಲೀಕರು ಮತ್ತು ಮಧ್ಯವರ್ತಿಗಳಿಗೆ ಸಹಕರಿಸಿದ ನಂತರ ಜಮೀನು ಮಂಜೂರು ಮಾಡಿದ್ದಾರೆ ಎಂದು ಸತ್ಯಶೋಧನಾ ವರದಿಯಲ್ಲಿ ತಿಳಿಸಲಾಗಿದೆ. 2 ಸಾವಿರ ಎಕರೆ ಅರಣ್ಯ ಭೂಮಿ ಸೇರಿದಂತೆ 3 ಸಾವಿರ ಎಕರೆಗೂ ಹೆಚ್ಚು ಒತ್ತುವರಿಯನ್ನು ಕಂದಾಯ ಅಧಿಕಾರಿಗಳು ಬೋಗಸ್ ಫಲಾನುಭವಿಗಳಿಗೆ ಮಂಜೂರು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದೀಗ ನಕಲಿ ಫಲಾನುಭವಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಪೊಲೀಸರಿಗೆ ಹರಸಾಹಸವಾಗಿದೆ.
ಸಮಸ್ಯೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಜಿಲ್ಲಾಡಳಿತ ನಿರ್ಧರಿಸಿದ್ದು, ಬಹುಕಾಲದಿಂದ ಬಾಕಿ ಉಳಿದಿರುವ ಈ ಸಮಸ್ಯೆಯನ್ನು ನಿರ್ಲಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಜಿಲ್ಲಾಧಿಕಾರಿ ಸಿ ಸತ್ಯಭಾಮಾ ಹೇಳಿದ್ದಾರೆ.
ಇತ್ತೀಚೆಗೆ ಹಾಸನಕ್ಕೆ ಭೇಟಿ ನೀಡಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ರಾಜ್ಯ ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಚಿಕ್ಕಮಗಳೂರು ಜಿಲ್ಲಾಡಳಿತ ಕಡೂರು ಮತ್ತು ಮೂಡಿಗೆರೆ ತಾಲೂಕಿನಲ್ಲಿ ಬೋಗಸ್ ದಾಖಲೆ ಆಧರಿಸಿ ಅಕ್ರಮವಾಗಿ ನೀಡಿದ್ದ 6 ಸಾವಿರ ಎಕರೆ ಜಮೀನು ಮಂಜೂರಾತಿ ರದ್ದುಗೊಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


