ಸೊಪ್ಪು-ಹಣ್ಣು ಮಾರುವವರ ಬಳಿ ಹಫ್ತಾ ವಸೂಲಿ ಬಿಟ್ಟು, ಕೆಲಸ ಮಾಡಿದ್ದರೆ ಕಂದಮ್ಮಗಳ ಮಾರಣಹೋಮ ತಪ್ಪುತಿತ್ತು!
ಮೈಸೂರು ಹಾಗೂ ಮಂಡ್ಯದಲ್ಲಿ ನಡೆದ ಹೆಣ್ಣು ಭ್ರೂಣ ಹತ್ಯೆ ಪ್ರಕರಣದ ವಿಚಾರವಾಗಿ ಗೃಹ ಸಚಿವ ಪರಮೇಶ್ವರ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ಬಿಜೆಪಿ ಮುಖಂಡ ಬಸವನಗೌಡ ಪಾಟೀಲ್ ಯತ್ನಾಳ್ ಕಿಡಿ ಕಾರಿದ್ದಾರೆ.

ವಿಜಯಪುರ: ಮೈಸೂರು ಹಾಗೂ ಮಂಡ್ಯದಲ್ಲಿ ನಡೆದ ಹೆಣ್ಣು ಭ್ರೂಣ ಹತ್ಯೆ ಪ್ರಕರಣದ ವಿಚಾರವಾಗಿ ಗೃಹ ಸಚಿವ ಪರಮೇಶ್ವರ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ಬಿಜೆಪಿ ಮುಖಂಡ ಬಸವನಗೌಡ ಪಾಟೀಲ್ ಯತ್ನಾಳ್ ಕಿಡಿ ಕಾರಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಭ್ರೂಣ ಹತ್ಯೆ ಪ್ರಕರಣದಲ್ಲಿ ರಾಜ್ಯದ ಒಬ್ಬ ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಂದ ಅಸಹಾಯಕ ಮಾತುಗಳನ್ನು ನಿರೀಕ್ಷಿಸರಲಿಲ್ಲ. ಗೃಹ, ಪೊಲೀಸ್ ಹಾಗೂ ಬೇಹುಗಾರಿಕೆ ಇಲಾಖೆಯ ಸಾಮೂಹಿಕ ವೈಫಲ್ಯವೇ ಭ್ರೂಣ ಹತ್ಯೆಗೆ ಕಾರಣವಾಗಿದೆ. ಈ ಇಲಾಖೆಗಳು ಸರಿಯಾಗಿ ಕಾರ್ಯ ನಿರ್ವಹಿಸಿದ್ದರೆ ಭ್ರೂಣ ಹತ್ಯೆ ತಡೆಯಬಹುದಿತ್ತು ಎಂದು ಅವರು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
ಸೊಪ್ಪು, ಹಣ್ಣು ಮಾರುವವರನ್ನು ಎತ್ತಂಗಡಿ ಮಾಡುವುದನ್ನು ಬಿಟ್ಟು, ಸಿವಿಲ್ ವ್ಯಾಜ್ಯಗಳಲ್ಲಿ ಮೂಗು ತೂರಿಸುವುದನ್ನು ಬಿಟ್ಟು, ಕೊಟ್ಟಿರುವ ಗಸ್ತು ವಾಹನದಲ್ಲಿ ವಸೂಲಿ, ಹಫ್ತಾ ತೆಗೆಯುವುದು ಬಿಟ್ಟು, ಕಟ್ಟು ನಿಟ್ಟಾಗಿ ಕೆಲಸ ಮಾಡಿದ್ದರೆ ಕಂದಮ್ಮಗಳ ಮಾರಣಹೋಮ ತಪ್ಪುತಿತ್ತು ಎಂದು ಅವರು ಕಿಡಿಕಾರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


