ನಿಯಮ ಮೀರಿ ನಮ್ಮ ಮೆಟ್ರೋದಲ್ಲಿ ಗೋಬಿ ಸವಿದ ವ್ಯಕ್ತಿಗೆ ರೂ.500 ದಂಡ!
ನಿಯಮ ಮೀರಿ ರೈಲಿನಲ್ಲಿ ಗೋಬಿ ಸವಿದ ವ್ಯಕ್ತಿಗೆ ನಮ್ಮ ಮೆಟ್ರೋ ರೂ.500 ದಂಡ ವಿಧಿಸಿದೆ.

ಬೆಂಗಳೂರು: ನಿಯಮ ಮೀರಿ ರೈಲಿನಲ್ಲಿ ಗೋಬಿ ಸವಿದ ವ್ಯಕ್ತಿಗೆ ನಮ್ಮ ಮೆಟ್ರೋ ರೂ.500 ದಂಡ ವಿಧಿಸಿದೆ.
ಸುನೀಲ್ ಕುಮಾರ್ ಮತ್ತು ಅವರ ಸ್ನೇಹಿತರು ಜಯನಗರದ ಪ್ರಮುಖ ಆಭರಣ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದು, ಪ್ರತೀನಿತ್ಯ ಕೆಲಸಕ್ಕೆ ತೆರಳಲು ಸಂಪಿಗೆ ರಸ್ತೆ ನಿಲ್ದಾಣದಲ್ಲಿ ಮೆಟ್ರೋ ಹತ್ತಿದ್ದರು. ಮಂಗಳವಾರ ಕೂಡ ಮೆಟ್ರೋ ರೈಲು ಹತ್ತಿದ್ದು, ಈ ವೇಳೆ ಸುನೀಲ್ ಅವರು ಮೆಟ್ರೋ ರೈಲಿನಲ್ಲಿ ಗೋಬಿ ಸವಿದಿದ್ದಾರೆ. ಇದರ ವಿಡಿಯೋವನ್ನು ಸ್ನೇಹಿತರು ರೆಕಾರ್ಡ್ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.
ಈ ನಡುವೆ ನಿಯಮ ಉಲ್ಲಂಘಿಸಿದ ಯೂಟ್ಯೂಬರ್ ಗೆ ನಮ್ಮ ಮೆಟ್ರೋ ರೂ.500 ದಂಡ ವಿಧಿಸಿದೆ. ಅಲ್ಲದೆ, ಸುನೀಲ್ ಹಾಗೂ ಅವರ ಸ್ನೇಹಿತರ ವಿರುದ್ಧ ಸಿಎಆರ್ (ನಾನ್-ಕಾಗ್ನಿಜಬಲ್ ವರದಿ) ದಾಖಲಿಸಲಾಗಿದೆ, ಎಚ್ಚರಿಕೆ ನೀಡಿದ ಬಳಿಕ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಿಎಂಆರ್ಸಿಎಲ್ನ ಕಾರ್ಯಾಚರಣೆ ಮತ್ತು ನಿರ್ವಹಣೆಯ ಕಾರ್ಯನಿರ್ವಾಹಕ ನಿರ್ದೇಶಕ ಎ ಎಸ್. ಶಂಕರ್ ಅವರು ಮಾತನಾಡಿ, ಎಲ್ಲಾ ಪ್ರಯಾಣಿಕರು ನಿಯಮಗಳನ್ನು ಪಾಲನೆ ಮಾಡುತ್ತಿದ್ದಾರೆ. ವಿಡಿಯೋವನ್ನು ಗಮನಿಸಿದ ಭದ್ರತಾ ಸಿಬ್ಬಂದಿಗಳು ಅವರ ಬಂಧನಕ್ಕಾಗಿ ಜಯನಗರದಲ್ಲಿ ಕಾಯುತ್ತಿದ್ದರು. ಮೂವರು ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆಯೇ ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. ಅರ್ಧ ದಿನ ಮೂವರನ್ನು ಠಾಣೆಯಲ್ಲಿರಿಸಲಾಗಿತ್ತು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


