ರಾಜ್ಯ

19 ವರ್ಷದ ಯುವತಿ ಅಪಹರಣ, ಅತ್ಯಾಚಾರ ಎಸಗಿ ಕೊಲೆ; ಆರೋಪಿ ಯುವಕನಿಗಾಗಿ ಪೊಲೀಸರ ಹುಡುಕಾಟ

19 ವರ್ಷದ ಯುವತಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ್ದಲ್ಲದೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಆರೋಪಿಗಾಗಿ ಹುಡುಕಾಟ ಆರಂಭಿಸಿರುವುದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಅರ್ಪಿತಾ ಅವರನ್ನು ಅಕ್ಟೋಬರ್ 3ರಂದು ಆಟೋ ಚಾಲಕ ಮತ್ತು ಹುಲ್ಲೂರು ಗ್ರಾಮದ ನಿವಾಸಿ ಅಜಯ್ ಅಪಹರಿಸಿದ್ದಾನೆ.

19 ವರ್ಷದ ಯುವತಿ ಅಪಹರಣ, ಅತ್ಯಾಚಾರ ಎಸಗಿ ಕೊಲೆ; ಆರೋಪಿ ಯುವಕನಿಗಾಗಿ ಪೊಲೀಸರ ಹುಡುಕಾಟ
ಸಂಗ್ರಹ ಚಿತ್ರ
Published On :

ಚಿತ್ರದುರ್ಗ: 19 ವರ್ಷದ ಯುವತಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ್ದಲ್ಲದೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಆರೋಪಿಗಾಗಿ ಹುಡುಕಾಟ ಆರಂಭಿಸಿರುವುದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಸಂತ್ರಸ್ತೆ ಅರ್ಪಿತಾರನ್ನು ಅಕ್ಟೋಬರ್ 3ರಂದು ಆಟೋ ಚಾಲಕ ಮತ್ತು ಹುಲ್ಲೂರು ಗ್ರಾಮದ ನಿವಾಸಿ ಅಜಯ್ ಅಪಹರಿಸಿದ್ದಾನೆ.

ಆಕೆಯ ಮೇಲೆ ಅತ್ಯಾಚಾರ ಎಸಗಿ, ಹಲ್ಲೆ ನಡೆಸಿದ್ದಾನೆ. ಆಕೆ ತೀವ್ರವಾಗಿ ಗಾಯಗೊಂಡಿರುವುದನ್ನು ಕಂಡ ಆರೋಪಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಅಜಯ್ ಆಕೆಯನ್ನು ಪ್ರೀತಿಸುತ್ತಿದ್ದನು. ಆದರೆ, ಆಕೆ ಇದನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಳು. ಇದರಿಂದ ಕುಪಿತಗೊಂಡ ಆತ ಸೇಡು ತೀರಿಸಿಕೊಳ್ಳಲು ನಿರ್ಧರಿಸಿ ಕೃತ್ಯವನ್ನು ಎಸಗಿದ್ದಾನೆ.

ಮಾರಣಾಂತಿಕವಾಗಿ ಗಾಯಗೊಂಡಿದ್ದ ಯುವತಿ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಈ ಸಂಬಂಧ ಆಕೆಯ ಪೋಷಕರು ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಸಂಬಂಧ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.