ಬೆಂಗಳೂರು: ಹೊತ್ತಿ ಉರಿದ ಪಟಾಕಿ ಅಂಗಡಿ, 3 ಸಾವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ
ಪಟಾಕಿ ಅನ್ ಲೋಡ್ ಮಾಡುತ್ತಿದ್ದ ವೇಳೆ ಪಟಾಕಿ ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡು, ಮೂವರಿಗೆ ಗಾಯಗಳಾದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ವರದಿಯಾಗಿದೆ.

ಬೆಂಗಳೂರು: ಪಟಾಕಿ ಅನ್ ಲೋಡ್ ಮಾಡುತ್ತಿದ್ದ ವೇಳೆ ಪಟಾಕಿ ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡು, 3 ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ವರದಿಯಾಗಿದೆ.
ನವೀನ್ ಎಂಬುವವರಿಗೆ ಸೇರಿದ ಪಟಾಕಿ ಅಂಗಡಿಯಲ್ಲಿ ಈ ಅವಘಡ ಸಂಭವಿಸಿದೆ. ಲಾರಿಯಿಂದ ಪಟಾಕಿ ಅನ್ ಲೋಡ್ ಮಾಡುವಾಗ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಈ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿದ್ದು, 4-5 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಅಂಗಡಿಯ ಎದುರು ನಿಲ್ಲಿಸಿದ್ದ 3 ಬೈಕ್ ಗಳು ಸುಟ್ಟು ಕರಕಲಾಗಿವೆ. ಓರ್ವ ವ್ಯಕ್ತಿ ನಾಪತ್ತೆಯಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


