ರಾಜ್ಯ

ಬೆಂಗಳೂರು: ಜ್ಯುವೆಲ್ಲರಿ ಮಾಲೀಕನ ಮೇಲೆ ಗುಂಡಿನ ದಾಳಿ, 1 ಕೆಜಿ ಚಿನ್ನಾಭರಣದೊಂದಿಗೆ ದರೋಡೆಕೋರರು ಪರಾರಿ

ನಾಲ್ವರು ದರೋಡೆಕೋರರು ಆಭರಣ ಮಳಿಗೆಯೊಂದರ ಮಾಲೀಕರ ಮೇಲೆ ಗುಂಡು ಹಾರಿಸಿ, ಅವರ ಅಂಗಡಿಯಲ್ಲಿದ್ದ ಒಂದು ಕೆಜಿ ಚಿನ್ನಾಭರಣ ದೋಚಿರುವ ಘಟನೆ ಬ್ಯಾಡರಹಳ್ಳಿ ಪೈಪ್‌ಲೈನ್ ರಸ್ತೆಯಲ್ಲಿ ಗುರುವಾರ ನಡೆದಿದೆ

ಬೆಂಗಳೂರು: ಜ್ಯುವೆಲ್ಲರಿ ಮಾಲೀಕನ ಮೇಲೆ ಗುಂಡಿನ ದಾಳಿ, 1 ಕೆಜಿ ಚಿನ್ನಾಭರಣದೊಂದಿಗೆ ದರೋಡೆಕೋರರು ಪರಾರಿ
ಕಳ್ಳತನವಾದ ಜ್ಯುವೆಲ್ಲರಿ ಶಾಪ್
Published On :

ಬೆಂಗಳೂರು: ನಾಲ್ವರು ದರೋಡೆಕೋರರು ಆಭರಣ ಮಳಿಗೆಯೊಂದರ ಮಾಲೀಕರ ಮೇಲೆ ಗುಂಡು ಹಾರಿಸಿ, ಅವರ ಅಂಗಡಿಯಲ್ಲಿದ್ದ ಒಂದು ಕೆಜಿ ಚಿನ್ನಾಭರಣ ದೋಚಿರುವ ಘಟನೆ ಬ್ಯಾಡರಹಳ್ಳಿ ಪೈಪ್‌ಲೈನ್ ರಸ್ತೆಯಲ್ಲಿ ಗುರುವಾರ ನಡೆದಿದೆ. 

ಬೆಳಗ್ಗೆ 2 ದ್ವಿಚಕ್ರ ವಾಹನಗಳಲ್ಲಿ ವಿನಾಯಕ ಜ್ಯುವೆಲ್ಲರಿ ಶಾಪ್ ಬಳಿ ಬಂದ ನಾಲ್ವರು ದರೋಡೆಕೋರರು ಮಾಲೀಕ ಮನೋಜ್ ಲೋಹರ್ ನನ್ನು ಬೆದರಿಸಿ ದರೋಡೆಗೆ ಯತ್ನಿಸಿದ್ದಾರೆ.  ಮನೋಜ್ ತಡೆಯುವ ಪ್ರಯತ್ನ ಮಾಡಿದಾಗ ಆತನ ತೊಡೆಗೆ ಗುಂಡು ಹಾರಿಸಿ, ಶಾಪ್ ನಲ್ಲಿದ್ದ ಒಂದು ಕೆ.ಜಿಯಷ್ಟು ಚಿನ್ನಾಭರಣ ದೋಚಿದ್ದಾರೆ.

ಬಳಿಕ ಪರಾರಿಯಾಗಲು ಯತ್ನಿಸಿದ ದರೋಡೆಕೋರರನ್ನು ಮನೋಜ್ ತಡೆಯಲು ಯತ್ನಿಸಿದ್ದಾರೆ. ಆಗ ಎಚ್ಚೆತ್ತ ದುಷ್ಕರ್ಮಿಗಳು ತಾವು ತಂದಿದ್ದ ಬೈಕ್ ನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಗುಂಡೇಟಿನಿಂದ ಗಾಯಗೊಂಡಿರುವ ಮನೋಜ್ ಅಪಾಯದಿಂದ ಪಾರಾಗಿದ್ದಾರೆ. ದರೋಡೆಕೋರರು ಬಂಧನಕ್ಕಾಗಿ ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು  ಪಶ್ಚಿಮ ವಲಯದ ಡಿಪಿಸಿ ಎಸ್. ಗಿರೀಶ್ ಸದ್ದಿಗಾರರೊಂದಿಗೆ ತಿಳಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.