ರಾಜ್ಯ

ಮೈಸೂರು: ಎರಡು ಬಸ್‌ ಗಳ ನಡುವೆ ಮುಖಾಮುಖಿ ಡಿಕ್ಕಿ, 20 ಮಂದಿಗೆ ಗಾಯ

ತಮಿಳುನಾಡಿನ ಖಾಸಗಿ ಬಸ್ ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸುಮಾರು 20 ಪ್ರಯಾಣಿಕರು ಗಾಯಗೊಂಡ ಘಟನೆ ಮೈಸೂರಿನ ಮಣಿಪಾಲ್ ಆಸ್ಪತ್ರೆ ಜಂಕ್ಷನ್‌ನಲ್ಲಿ ಶುಕ್ರವಾರ ನಡೆದಿದೆ.

ಮೈಸೂರು: ಎರಡು ಬಸ್‌ ಗಳ ನಡುವೆ ಮುಖಾಮುಖಿ ಡಿಕ್ಕಿ, 20 ಮಂದಿಗೆ ಗಾಯ
ದಸರಾ ಸ್ವಾಗತ ಕಾಮಾನು ಬಸ್ ಮೇಲೆ ಬಿದ್ದಿರುವ ದೃಶ್ಯ
Published On :

ಮೈಸೂರು: ತಮಿಳುನಾಡಿನ ಖಾಸಗಿ ಬಸ್ ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸುಮಾರು 20 ಪ್ರಯಾಣಿಕರು ಗಾಯಗೊಂಡ ಘಟನೆ ಮೈಸೂರಿನ ಮಣಿಪಾಲ್ ಆಸ್ಪತ್ರೆ ಜಂಕ್ಷನ್‌ನಲ್ಲಿ ಶುಕ್ರವಾರ ನಡೆದಿದೆ. 

ಜಂಕ್ಷನ್‌ನಲ್ಲಿ ಸಿಇಎಸ್‌ಸಿ ವತಿಯಿಂದ ದಸರಾ ಸ್ವಾಗತ ದೀಪಾಲಂಕಾರಕ್ಕೆ ನಿರ್ಮಿಸಲಾಗಿದ್ದ ಕಬ್ಬಿಣದ ಕಂಬಕ್ಕೆ ಬಸ್‌ನೊಂದು ಡಿಕ್ಕಿ ಹೊಡೆದು ನಂತರ ಎದುರಿನಿಂದ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಬಸ್ ಮೈಸೂರು ಉಪನಗರ ಬಸ್ ನಿಲ್ದಾಣದಿಂದ ಬೆಂಗಳೂರಿಗೆ ತೆರಳುತ್ತಿದ್ದರೆ ತಮಿಳುನಾಡು ನೋಂದಣಿ ಬಸ್ ಹೊರವರ್ತುಲ ರಸ್ತೆಯಲ್ಲಿ ಸಂಚರಿಸುತ್ತಿತ್ತು. ಬಸ್‌ಗಳ ಮೇಲೆ ಅಟ್ಟಣಿಗೆ ಕುಸಿದಿದೆ. ಘಟನೆಯಲ್ಲಿ ಡಿಕ್ಕಿಯಿಂದಾಗಿ ತಮಿಳುನಾಡು ಬಸ್‌ನಲ್ಲಿದ್ದ ಒಂಬತ್ತು ಪ್ರಯಾಣಿಕರು ಮತ್ತು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿದ್ದ 11 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಮಣಿಪಾಲ ಆಸ್ಪತ್ರೆಯಲ್ಲಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದು ಕೂಡಲೇ ಡಿಸ್ಚಾರ್ಜ್ ಆಗಿದ್ದಾರೆ. ಈ ಸಂಬಂಧ ಎನ್‌ಆರ್ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಎರಡೂ ಬಸ್‌ಗಳನ್ನು ವಶಕ್ಕೆ ಪಡೆದಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.