ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ: ದಸರಾ ಯುವ ಕವಿಗೋಷ್ಠಿ ಉದ್ಘಾಟನೆಯಿಂದ ಭಗವಾನ್‌ಗೆ ಕೊಕ್!
ಒಕ್ಕಲಿಗರು ಸಂಸ್ಕೃತಿ ಹೀನ ಪಶುಗಳು ಎಂದು ಹೇಳುವ ಮೂಲಕ ಒಕ್ಕಲಿಗರ ಆಕ್ರೋಶಕ್ಕೆ ಗುರಿಯಾಗಿರುವ ಪ್ರೊಫೆಸರ್ ಕೆ.ಎಸ್ ಭಗವಾನ್ ಗೆ ಇದೀಗ ದಸರಾ ಯುವ ಕವಿಗೋಷ್ಠಿ ಉದ್ಘಾಟನೆಯಿಂದ ಕೊಕ್ ಕೊಡಲಾಗಿದೆ.

ಮೈಸೂರು: ಒಕ್ಕಲಿಗರು ಸಂಸ್ಕೃತಿ ಹೀನ ಪಶುಗಳು ಎಂದು ಹೇಳುವ ಮೂಲಕ ಒಕ್ಕಲಿಗರ ಆಕ್ರೋಶಕ್ಕೆ ಗುರಿಯಾಗಿರುವ ಪ್ರೊಫೆಸರ್ ಕೆ.ಎಸ್ ಭಗವಾನ್ ಗೆ ಇದೀಗ ದಸರಾ ಯುವ ಕವಿಗೋಷ್ಠಿ ಉದ್ಘಾಟನೆಯಿಂದ ಕೊಕ್ ಕೊಡಲಾಗಿದೆ.
ಭಗವಾನ್ ಹೇಳಿಕೆಗೆ ಒಕ್ಕಲಿಗ ಸಮುದಾಯ ರೊಚ್ಚಿಗೆದ್ದಿದ್ದು ಬಂಧಿಸುವಂತೆ ಆಗ್ರಹಿಸಿದೆ. ಇನ್ನು ರಾಜ್ಯ ಒಕ್ಕಲಿಗರ ಪಡೆಯ ಪ್ರತಿಭಟನೆ ಎಚ್ಚರಿಕೆಗೆ ಮಣಿದಿರುವ ದಸರಾ ಸಮಿತಿ ಯುವ ಕವಿಗೋಷ್ಠಿ ಉದ್ಘಾಟನೆಯಿಂದ ಪ್ರೊ ಭಗವಾನ್‌ಗೆ ಕೊಕ್ ನೀಡಿದ್ದು ಅವರ ಬದಲಿಗೆ ಸಾಹಿತಿ ಡಾ. ಡಿಕೆ ರಾಜೇಂದ್ರ ಅವರಿಂದ ಉದ್ಘಾಟನೆ ಮಾಡಿಸಲಾಗಿದೆ.
ಮೈಸೂರಿನಲ್ಲಿ ನಡೆದ ಮಹಿಷ ಉತ್ಸವದಲ್ಲಿ ಮಾತನಾಡಿದ್ದ ಭಗವಾನ್, ಒಕ್ಕಲಿಗರು ಸಂಸ್ಕೃತಿ ಹೀನ ಪಶುಗಳು ಎಂದು ಕುವೆಂಪು ಹೇಳಿದ್ದಾರೆ ಎನ್ನುವ ಮೂಲಕ ಹೊಸ ವಿವಾದಕ್ಕೆ ಗುರಿಯಾಗಿದ್ದರು. ಭಗವಾನ್ ಹೇಳಿಕೆ ಖಂಡಿಸಿ, ಒಕ್ಕಲಿಗ ಸಮುದಾಯವನ್ನು ಕೆರಳಿಸಿದ್ದು, ರಸ್ತೆಗಳಿದು ಪ್ರತಿಭಟನೆ ಮಾಡುತ್ತಿದ್ದಾರೆ.
ಕೆಎಸ್ ಭಗವಾನ್ ಹೇಳಿದ್ದೇನು
ಮಹಿಷ ದಸರಾ ಆಚರಣೆ ಸಮಿತಿಯಿಂದ ಇಲ್ಲಿನ ಪುರಭವನದ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಭಗವಾನ್, ನಾನು ಹಿಂದೂ ಧರ್ಮವನ್ನು ಯಾವಾಗಲೋ ಬಿಟ್ಟು ಬಿಟ್ಟೆ ಎಂದು ಕುವೆಂಪು ಯಾವಾಗಲೂ ಹೇಳುತ್ತಿದ್ದರು. ಆದರೆ, ಅವರ ಶಿಷ್ಯರಿಗೆ ಅದು ಅರ್ಥವಾಗಲಿಲ್ಲ. ಆದ್ದರಿಂದಲೇ ಕುವೆಂಪು, ಒಕ್ಕಲಿಗರು ಸಂಸ್ಕೃತಿ ಹೀನ ಪಶುಗಳು ಎಂದು ಹೇಳಿದ್ದರು. ಇದು ನನ್ನ ಮಾತಲ್ಲ ಕುವೆಂಪು ಅವರದ್ದು. ಇಲ್ಲದಿದ್ದರೆ ನನಗೆ ಹೊಡೆಯಲು ಬರುತ್ತಾರೆ. ನನ್ನನ್ನು ಕೊಂದು ಹಾಕಿ ಬಿಡುತ್ತಾರೆ. ಆದರೆ, ನಿಜ ಹೇಳಿಯೇ ಸಾಯಬೇಕು ಎಂದರು. ಕುವೆಂಪು ಮಾತು ಅವರ ಶಿಷ್ಯರಿಗೆ ಈಗಲೂ ಅರ್ಥವಾಗಿಲ್ಲ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


